

ಚಿತ್ರದುರ್ಗ: ನಗರದ ದೇವರಾಜ್ ಅರಸ್ ಶಿಕ್ಷಣ ಸಂಸ್ಥೆಯಲ್ಲಿ ಜ. 15ರಿಂದ 18ರ ವರೆಗೂ ಆಯೋಜಿಸಿರುವ ಮಹಾ ಡೆಸ್ಟಿನಿ-2025ರ ಲೋಗೊವನ್ನು ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಕಲಾ, ಸಿಇಒ ಎಂ.ಸಿ.ರಘುಚಂದನ್ ಬುಧವಾರ ಬಿಡುಗಡೆಗೊಳಿಸಿದರು.
ನಂತರ ಎಂ.ಸಿ.ರಘುಚಂದನ್ ಮಾತನಾಡಿ, ಸಂಸ್ಥೆಯಿಂದ ಮಕರ ಸಂಕ್ರಾತಿ ಹಬ್ಬದ ಅಂಗವಾಗಿ ನಡೆಯುವ ಡೆಸ್ಟಿನಿಯ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಮಕ್ಕಳು ಪಾಲ್ಗೊಂಡು ಸಂಭ್ರಮಿಸಲಿ ಎಂಬ ಕಾರಣಕ್ಕೆ ವರ್ಣರಂಜಿತ ಲೋಗೊ ಬಿಡುಗಡೆ ಮಾಡಲಾಗಿದೆ ಎಂದರು. ಇದೇ ವೇಳೆ ಸಾವಿರಾರು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.