ಮಹಾಕೂಟದಲ್ಲಿ ಸ್ವಚ್ಚತಾ ಕಾರ್ಯಕ್ಕೆ ಚಾಲನೆ

4259e5ef-2d38-484d-b722-3238350aefbe
Published on

ಬಾಗಲಕೋಟೆ: ದಕ್ಷಿಣ ಕಾಶಿ ಎಂದೇ ಪ್ರಸಿದ್ದಿ‌ಪಡೆದ ಮಹಾಕೂಟದಲ್ಲಿ ಸಂಸದ ಪಿ.ಸಿ.ಗದ್ದಿಗೌಡರ ಚಾಲನೆ ನೀಡಿದರು. ಜಿಲ್ಲಾ ಪಂಚಾಯತ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಹಮ್ಮಿಕೊಂಡ ಸ್ವಚ್ಛತಾ ಕಾರ್ಯಕ್ಕೆ ಚಾಲನೆ ನೀಡಿ ಸ್ವಚ್ಛತಾ ಕಾರ್ಯದಲ್ಲಿ ಪಾಲ್ಗೊಂಡರು.

ದೇವಸ್ಥಾನದ ಸುತ್ತಮುತ್ತಲಿನ ಆವರಣ, ಪ್ರಸಾದ ನಿಲಯ ಸುತ್ತಮುತ್ತಲಿನ ಆವರಣ, ಪುಷ್ಕರಣಿಗಳ ಸುತ್ತಮುತ್ತಲಿನ ಸ್ವಚ್ಛತೆ, ಮುಖ್ಯ ರಸ್ತೆಗಳ ಸ್ವಚ್ಛತೆ ಮುಂತಾದವುಗಳ ಸ್ವಚ್ಛತೆ ಕೈಕೊಳ್ಳಲಾಯಿತು. ದೇವಾಲಯಗಳ ಆವರಣದಲ್ಲಿ ಗಿಡಗಳನ್ನು ನೆಡಲಾಯಿತು.

ಸ್ವಚ್ಛತಾ ಅಭಿಯಾನದಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ‌ ಕುರೇರ, ಉಪ ಕಾರ್ಯದರ್ಶಿ ಅಮರೇಶ ನಾಯಕ, ಯೋಜನಾ ನಿರ್ದೇಶಕ ಎನ್.ವಾಯ್.ಬಸರಿಗಿಡದ, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ ಸೇರಿದಂತೆ ಬಾದಾಮಿ ಮತ್ತು ಗುಳೇದಗುಡ್ಡ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಸಹಾಯಕ ನಿರ್ದೇಶಕರು, ನಂದಿಕೇಶ್ವರ ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿಧಿಗಳು, ಪಿಡಿಒ ಹಾಗೂ ಸಿಬ್ಬಂದಿ ವರ್ಗ, ಗ್ರಾಮದ ಹಿರಿಯರು, ಮುಖ್ಯಸ್ಥರು, ಶಾಲಾ ಮಕ್ಕಳು, ಎಸ್ ಬಿ ಎಂ ಜಿಲ್ಲಾ ಸಮಾಲೋಚಕರು ಹಾಗೂ ಎನ್ ಆರ್ ಎಲ್ ಎಮ್ ಸಿಬ್ಬಂದಿ ವರ್ಗದವರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net