ಮಹಾಜನ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಂವಾದ

mysore
Published on

ಮೈಸೂರು: ಮಹಾಜನ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯಶಾಸ್ತ್ರ ಮತ್ತು ವ್ಯವಹಾರ ಆಡಳಿತ ವಿಭಾಗ ಮತ್ತು ಐಕ್ಯೂಎಸಿ ಸಹಯೋಗದೊಂದಿಗೆ ಕೌಶಲ ಮತ್ತು ವೃತ್ತಿ ಆಯ್ಕೆ ಕುರಿತು ವಿದ್ಯಾರ್ಥಿಗಳಿಗೆ ಸಂವಾದ ಕಾರ್ಯಕ್ರಮವನ್ನು ಇತ್ತೀಚೆಗೆ ಆಯೋಜಿಸಲಾಗಿತ್ತು.

ಬೆಂಗಳೂರಿನ ರಾಮಯ್ಯ ಕಾಲೇಜಿನ ಮಾರ್ಕೆಟಿಂಗ್ ಮತ್ತು ಅಂತಾರಾಷ್ಟ್ರೀಯ ವ್ಯವಹಾರ ವಿಭಾಗದ ಸಹಾಯಕ ಪ್ರಾಧ್ಯಾಪಕಿ ಅರುಲ್ ಜ್ಯೋತಿ ಅವರು ಪದವಿ ನಂತರ ಪ್ರಸ್ತುತಿ ಕೌಶಲ, ಸರಿಯಾದ ಮಾರ್ಗವನ್ನು ಆರಿಸಿಕೊಳ್ಳುವುದರ ಪ್ರಾಮುಖ್ಯತೆ ಮತ್ತು ಪದವಿ ಮುಗಿದ ನಂತರ ಯಶಸ್ಸನ್ನು ಪಡೆಯಲು ವಿದ್ಯಾರ್ಥಿಗಳು ಮಾಡಬೇಕಾದ ಪ್ರಾಮಾಣಿಕ ಪ್ರಯತ್ನ ಕುರಿತು ತಿಳಿಸಿದರು.

ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿದ್ಯಾರ್ಥಿಗಳಿಗೆ ಸಂವಹನ ಕೌಶಲ ಮತ್ತು ಪ್ರಸ್ತುತಿ ಕೌಶಲಗಳನ್ನು ಸುಧಾರಿಸಿಕೊಳ್ಳಬೇಕು. ಪದವಿ ನಂತರ ಸರಿಯಾದ ಮಾರ್ಗವನ್ನು ಆರಿಸಿಕೊಳ್ಳುವಲ್ಲಿ ವಿದ್ಯಾರ್ಥಿಗಳು ಜವಾಬ್ದಾರಿಯುತರಾಗಿರಬೇಕು ಎಂದರು.

ರಾಮಯ್ಯ ಕಾಲೇಜಿನ ವ್ಯವಹಾರ ಅಭಿವೃದ್ಧಿ ಸಲಹೆಗಾರ್ತಿ ಅಕ್ಷತಾ, ಪ್ರಭಾರ ಪ್ರಾಂಶುಪಾಲ ಡಾ.ಎಚ್.ಶ್ರೀಧರ, ವಾಣಿಜ್ಯ ಮತ್ತು ವ್ಯವಹಾರ ಆಡಳಿತ ವಿಭಾಗದ ಮುಖ್ಯಸ್ಥ ಡಾ. ಶಿವಕುಮಾರ್, ಕಾರ್ಯಕ್ರಮ ಸಂಯೋಜಕಿ ಎಂ.ರಶ್ಮಿ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net