

ಹುಬ್ಬಳ್ಳಿ: ಕೇಂದ್ರ ಸರ್ಕಾರ ಮಹದಾಯಿ ಅಧಿಸೂಚನೆ ಹೊರಡಿಸಿದ ಹಿನ್ನೆಲೆಯಲ್ಲಿ ಮಹಾನಗರ ಜಿಲ್ಲಾ ಬಿಜೆಪಿ ಕಾರ್ಯಕರ್ತರು ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಮಂಗಳವಾರ ವಿಜಯೋತ್ಸವ ಆಚರಿಸಿದರು.
ಡೋಲು, ನಗಾರಿ ಬಾರಿಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಜಯ ಘೋಷಣೆ ಕೂಗಿದರು. ದಶಕಗಳಿಂದ ಇದ್ದ ಮಹದಾಯಿ ನದಿ ನೀರು ಹಂಚಿಕೆ ಬಿಕ್ಕಟ್ಟನ್ನು ಕೇಂದ್ರ ಸರ್ಕಾರ ಪರಿಹರಿಸುವ ಮೂಲಕ ಈ ಭಾಗದ ಬಹುದಿನಗಳ ಬೇಡಿಕೆ ಈಡೇರಿಸಿದೆ ಎಂದರು.
ಪಟಾಕಿ ಸಿಡಿಸಿ, ಪರಸ್ಪರ ಸಿಹಿ ತಿನ್ನಿಸಿದ್ದರು. ಬಿಜೆಪಿ ಮಹಾನಗರ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವಾನಂದ ಮುತ್ತಣ್ಣವರ ಹಾಗೂ ಮಹಾನಗರ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಅರವಿಂದ ಏಗನಗೌಡರ ನೇತೃತ್ವದಲ್ಲಿ ನಡೆದ ವಿಜಯೋತ್ಸವದಲ್ಲಿ ರವಿ ನಾಯಕ, ಈಶ್ವರಗೌಡ ಪಾಟೀಲ, ಶರಣು ಅಂಗಡಿ, ವೀರಣ್ಣ ಕಾಶಪ್ಪನವರ, ಭಾರತಿ ಟಪಾಲ, ವಿಜಯಲಕ್ಷ್ಮೀ ತಿಮ್ಮೋಲಿ, ಜಯಶ್ರೀ ನಿಂಬರಗಿ, ಉಮಾ ಮುಕುಂದ, ಸಪ್ನಾ ಸಿಂಧೆ ಮತ್ತಿತರರು ಹಾಜರಿದ್ದರು.
EndFragment