ಮಹಾನಗರ ಪಾಲಿಕೆ ಘೋಷಣೆ ಸ್ವಾಗತಾರ್ಹ

Nitin Karpoor
Published on

ಬೀದರ್: ಪ್ರಸಕ್ತ ಸಾಲಿನ ರಾಜ್ಯ ಬಿಜೆಟ್‍ನಲ್ಲಿ ಬೀದರ್ ನಗರಸಭೆಯನ್ನು ಮಹಾನಗರ ಪಾಲಿಕೆಯನ್ನಾಗಿ ಮೇಲ್ದರ್ಜೆಗೆ ಏರಿಸುವುದಾಗಿ ಘೋಷಿಸಿರುವುದು ಸ್ವಾಗತಾರ್ಹವಾಗಿದೆ ಎಂದು ನಗರಸಭೆ ಸದಸ್ಯ ನಿತಿನ್ ಕರ್ಪೂರ ಪ್ರತಿಕ್ರಿಯಿಸಿದ್ದಾರೆ.
ಬೀದರ್ ನಗರ ಈಗ ಬೃಹದಾಕಾರವಾಗಿ ಬೆಳೆದಿದೆ. ನಾಲ್ಕೂ ದಿಕ್ಕುಗಳಲ್ಲಿ ವಿಸ್ತರಿಸಿಕೊಂಡಿದೆ. ಹೀಗಾಗಿ ನಗರಸಭೆಯನ್ನು ಮೇಲ್ದರ್ಜೆಗೆ ಏರಿಸುವುದು ಅಗತ್ಯವಾಗಿತ್ತು. ಈ ಕುರಿತು ರಾಜ್ಯ ಬಿಜೆಪಿ ಸರ್ಕಾರ ಮಾಡಿರುವ ಘೋಷಣೆ ಅತ್ಯಂತ ಸೂಕ್ತವಾಗಿದೆ ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net