ಮಹಾರಾಣಿ ಕಾಲೇಜಿನಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಜಾಗೃತಿ

15
Published on

ಮೈಸೂರು: ಮಹಾರಾಣಿ ಮಹಿಳಾ ವಿಜ್ಞಾನ ಸಾಯುತ್ತ ಕಾಲೇಜಿನಲ್ಲಿ ಐಕ್ಯೂಎಸಿ ಮತ್ತು ಗ್ರಂಥಾಲಯದ ಸಹಯೋಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಪುಸ್ತಕ ಪ್ರದರ್ಶನ ಹಾಗೂ ವಿಶೇಷ ಉಪನ್ಯಾಸ ಹಾಗೂ ಇಲೆಕ್ಟ್ರಾನಿಕ್ ಸಂಪನ್ಮೂಲಗಳ ಸದ್ಬಳಕೆ ಕುರಿತು ಮಂಗಳವಾರ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯ ಸಹಾಯಕ ಗ್ರಂಥಪಾಲಕ ಹಾಗೂ ಮಾಹಿತಿ ಅಧಿಕಾರಿ ಬಿ.ನಂದೀಶ್ ಮಾತನಾಡಿ, ವಿದ್ಯಾರ್ಥಿಗಳಿಗೆ ಮುಂದಿನ ಜೀವನ ಹಾಗೂ ಉನ್ನತ ಶಿಕ್ಷಣಕ್ಕೆ ಉಪಯೋಗ ಆಗುವ ದೃಷ್ಟಿಯಿಂದ ಸ್ಪರ್ಧಾತ್ಮಕ ಪರೀಕ್ಷೆ ಬರೆಯಲು ಬೇಕಾಗಿರುವ ಪುಸ್ತಕಗಳನ್ನು ಪ್ರದರ್ಶಿಸಲಾಗಿದೆ. ಅಲ್ಲದೇ, ಅಂತರ್ಜಾಲದಲ್ಲಿ ಉಚಿತವಾಗಿ ಸಿಗುವ ಆನ್‌ಲೈನ್ ಪುಸ್ತಕಗಳು, ಜರ್ನಲ್‌ಗಳು, ನಿಯತಕಾಲಿಕೆಗಳು, ಕರ್ನಾಟಕ ಡಿಜಿಟಲ್ ಸಾರ್ವಜನಿಕ ಗ್ರಂಥಾಲಯ ಹಾಗೂ ಆನ್‌ಲೈನ್ ಡೇಟಾಬೇಸ್‌ಗಳು, ವ್ಯಾಕರಣ-ಪರಿಶೀಲಿಸುವ ಸಾಫ್ಟ್‌ವೇರ್, ಕೃತಿ ಚೌರ್ಯ-ಪರಿಶೀಲಿಸುವ ಸಾಫ್ಟ್‌ವೇರ್ ಮತ್ತು ಯುಜಿಸಿ ಕಾಯ್ದೆಗಳಿಗೆ ಸಂಬಂಧಿಸಿದ ಎಲೆಕ್ಟ್ರಾನಿಕ್ ಸಂಪನ್ಮೂಲಗಳನ್ನು ಪ್ರಾಯೋಗಿಕವಾಗಿ ತಿಳಿಸಿಕೊಡಲಾಗುತ್ತಿದೆ ಎಂದರು.
ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಡಿ.ರವಿ ಮಾತನಾಡಿ, ಗ್ರಂಥಾಲಯದಲ್ಲಿ ಹೆಚ್ಚಿನ ಸಮಯವನ್ನು ತೊಡಗಿಸಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮಶಕ್ತಿ ವೃದ್ಧಿಸಲಿದೆ. ಇದರಿಂದ ಸ್ಪರ್ಧಾತ್ಮಕ ಜೀವನ ಎದುರಿಸಲು ಸಾಧ್ಯವಾಗುತ್ತದೆ ಎಂದರು.
ಐಕ್ಯೂಎಸಿ ಸಂಚಾಲಕ ವಿ.ನಂದಕುಮಾರ್, ಗ್ರಂಥಪಾಲಕ ಎಚ್.ಎಲ್. ಜೈಪ್ರಕಾಶ್, ವಾಚನಾಲಯ ಸಂಚಾಲಕ ಡಾ.ವಿಂದುವಾಹಿನಿ, ಪ್ರಾಧ್ಯಾಪಕರಾದ ಪ್ರೊ.ಶ್ರೀಧರ್, ಪ್ರೊ.ಶ್ರೀಪಾದ, ಪ್ರೊ.ಕಿರಣ್ಮಯಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net