ಮಹಾರಾಣಿ ಕಾಲೇಜಿನಿಂದ ಆರೋಗ್ಯ ಶಿಬಿರ

20
Published on

ಮೈಸೂರು: ಮಹಾರಾಣಿ ಮಹಿಳಾ ವಿಜ್ಞಾನ ಸ್ವಾಯತ್ತ ಕಾಲೇಜಿನ ಯುವ ರೆಡ್ ಕ್ರಾಸ್ ಸಮಿತಿಯಿಂದ ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಮತ್ತು ಡಾ.ಅಗರ್ವಾಲ್ ಕಣ್ಣಿನ ಆಸ್ಪತ್ರೆ ಸಹಯೋಗದಲ್ಲಿ ಜಟ್ಟಿಹುಂಡಿ ಗ್ರಾಮದಲ್ಲಿ ಬುಧವಾರ ಆರೋಗ್ಯ ಉಚಿತ ತಪಾಸಣಾ ಶಿಬಿರ ಆಯೋಜಿಸಲಾಗಿತ್ತು.
ಗ್ರಾಮದ ಸರ್ಕಾರಿ ಪ್ರಾಥಮಿಕ ಶಾಲೆ ಆವರಣದಲ್ಲಿ ಆಯೋಜಿಸಿದ್ದ ಶಿಬಿರದಲ್ಲಿ ವೈದ್ಯರ ಸಮಾಲೋಚನೆ ಹಾಗೂ ಕಣ್ಣಿನ ಪರೀಕ್ಷೆ ಜತೆಗೆ ಇನ್ನಿತರ ಪ್ರಾಥಮಿಕ ಹಂತದ ಪರೀಕ್ಷೆಗಳನ್ನು ನಡೆಸಲಾಯಿತು.
ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯ ಕಾರ್ಪೋರೇಟ್ ವಿಭಾಗದ ಹಿರಿಯ ವ್ಯವಸ್ಥಾಪಕ ಸರ್ವಜಿತ್‌ಕುಮಾರ್ ಠಾಕೂರ್ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿ, ಮನುಷ್ಯನಿಗೆ ಆರೋಗ್ಯವೇ ಪ್ರಧಾನವಾಗಿದ್ದು, ಹೆಚ್ಚು ಕಾಳಜಿ ವಹಿಸುವಂತೆ ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜಿನ ಪ್ರಾಂಶುಪಾಲ ಡಾ.ಡಿ. ರವಿ ಮಾತನಾಡಿ, ಕೋವಿಡ್ ನಂತರದ ದಿನಗಳಲ್ಲಿ ಆರೋಗ್ಯ ತಪಾಸಣೆಯನ್ನು ಕಾಲಕಾಲಕ್ಕೆ ಮಾಡಿಸುವ ತುರ್ತನ್ನು ಹೇಳಿದರು.
ನಾರಾಯಣ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ವೈದ್ಯೆ ಡಾ.ಶ್ವೇತಾ, ಅಗರ್ವಾಲ್ ಕಣ್ಣಿನ ಆಸ್ಪತ್ರೆಯ ಮಾರುಕಟ್ಟೆ ವಿಭಾಗದ ನಿರ್ದೇಶಕ ಡಾ.ನಾಗೇಂದ್ರ ಪ್ರಸಾದ್, ಈಕ್ವಿಟಸ್ ಡೆವಲಪ್‌ಮೆಂಟ್ ಇನಿಟೇಟಿವ್ಸ್ ಟ್ರಸ್ಟ್‌ನ ಆರ್.ಸಚಿನ್, ಮುಖ್ಯಶಿಕ್ಷಕ ಕೃಷ್ಣೇಗೌಡ, ರೆಡ್‌ಕ್ರಾಸ್ ಸಮಿತಿ ಸಂಚಾಲಕಿ ಡಿ.ಗೀತಾ, ಯುವ ರೆಡ್‌ಕ್ರಾಸ್ ಸಮಿತಿ ಸದಸ್ಯರಾದ ಬಿ.ಎನ್.ಸಂತೋಷ್‌ಕುಮಾರ್, ಗ್ರಾಮದ ಚಲುವರಾಜು, ಆಸ್ಪತ್ರೆ ಸಿಬ್ಬಂದಿ ಹಾಗೂ ಶಾಲೆಯ ಶಿಕ್ಷಕರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net