ಮಹಾರಾಷ್ಟ್ರ ಪ್ರತಿನಿಧಿಗೆ ನಿರ್ಬಂಧಿಸಿ

CTD 30 MANAVI-02
Published on

ಚಿತ್ರದುರ್ಗ: ಎಂಇಎಸ್ ಕರಾಳ ದಿನಾಚರಣೆಗೆ ನ.1ರಂದು ಆಗಮಿಸುತ್ತಿರುವ ಮಹಾರಾಷ್ಟ್ರ ಸರ್ಕಾರದ ಪ್ರತಿನಿಧಿ, ಬೆಳಗಾವಿ ಗಡಿ ಪ್ರವೇಶಿಸದಂತೆ ನಿರ್ಬಂಧ ವಿಧಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ನವ ನಿರ್ಮಾಣ ಸೇನೆ ಕಾರ‌್ಯಕರ್ತರು ನಗರದಲ್ಲಿ ಸೋಮವಾರ ಜಿಲ್ಲಾಧಿಕಾರಿ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಪತ್ರ ರವಾನಿಸಿದರು.
ಕನ್ನಡ ರಾಜ್ಯೋತ್ಸವ ಸಂದರ್ಭದಲ್ಲಿ ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ ಆಯೋಜಿಸಲು ಉದ್ದೇಶಿಸಿರುವ ಕರಾಳ ದಿನಾಚರಣೆಗೆ ಮಹಾರಾಷ್ಟ್ರ ಸರ್ಕಾರದ ಪ್ರತಿನಿಧಿಯನ್ನು ಕಳಿಸುವುದಾಗಿ ಹೇಳಿರುವ ಅಲ್ಲಿಯ ಮುಖ್ಯಮಂತ್ರಿ ಏಕನಾಥ ಶಿಂಧೆ ಅವರ ಹೇಳಿಕೆ ಖಂಡನಾರ್ಹ.
ಮಹಾರಾಷ್ಟ್ರ ಪುಂಡರು ನಮ್ಮ ರಾಜ್ಯದೊಳಗೆ ಪ್ರವೇಶಿಸದಂತೆ ನಿರ್ಬಂಧ ವಿಧಿಸಬೇಕು. ಶಿಂಧೆ ಹೇಳಿಕೆ ಆಧರಿಸಿ ಕ್ರಿಮಿನಲ್ ಪ್ರಕರಣ ದಾಖಲಿಸ ಬೇಕೆಂದು ಆಗ್ರಹಿಸಿದರು.
ಈ ನಿಟ್ಟಿನಲ್ಲಿ ಬೆಳಗಾವಿ ಜಿಲ್ಲಾಡಳಿತ ನಿರ್ಲಕ್ಷೃ ಧೊರಣೆ ಪ್ರದರ್ಶಿಸಿದರೆ ಮಹಾರಾಷ್ಟ್ರ ಪ್ರತಿನಿಧಿ ಮುಖಕ್ಕೆ ಮಸಿ ಬಳಿಯಲಾಗುವುದು, ಕರಾಳ ದಿನಾಚರಣೆ ವೇದಿಕೆಗೆ ನುಗ್ಗಿ ನಾಡದ್ರೋಹಿಗಳಿಗೆ ತಕ್ಕ ಪಾಠ ಕಲಿಸಲಾಗುವುದು ಎಂದು ಎಚ್ಚರಿಸಿದರು.
ಸೇನೆ ಜಿಲ್ಲಾಧ್ಯಕ್ಷ ಎಂ.ತಿಪ್ಪೇಸ್ವಾಮಿ, ಉಪಾಧ್ಯಕ್ಷ ಎಂ.ಡಿ.ಶರೀಫ್, ಎಂ.ಮಂಜುನಾಥ್, ಪ್ರಭು, ಅಭಿಷೇಕ್, ತಿಪ್ಪೇಸ್ವಾಮಿ, ಮಣಿ ಮತ್ತಿತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net