ಮಹಾಸಭಾ ಅಧಿವೇಶನದಲ್ಲಿ ಪಾಲ್ಗೊಳ್ಳಿ

Sangmesh Mulge
Published on

ಬೀದರ್: ದಾವಣಗೆರೆಯಲ್ಲಿ ಡಿ. 24 ರಿಂದ 26 ರ ವರೆಗೆ ಹಮ್ಮಿಕೊಂಡಿರುವ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 23ನೇ ಮಹಾ ಅಧಿವೇಶನದಲ್ಲಿ ಜಿಲ್ಲೆಯ ಸಮಾಜದ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಮಹಾಸಭಾ ಜಿಲ್ಲಾ ಯುವ ಘಟಕದ ಅಧ್ಯಕ್ಷ ಸಂಗಮೇಶ ಮೂಲಗೆ ಮನವಿ ಮಾಡಿದ್ದಾರೆ.
ಮಠಾಧೀಶರು, ರಾಜಕೀಯ ಮುಖಂಡರು, ಸಮಾಜದ ಗಣ್ಯರು ಹಾಗೂ ಸಾಹಿತಿಗಳು ಅಧಿವೇಶನದಲ್ಲಿ ಭಾಗವಹಿಸಲಿದ್ದಾರೆ. ಧಾರ್ಮಿಕ, ಸಾಮಾಜಿಕ, ಶೈಕ್ಷಣಿಕ, ಕೈಗಾರಿಕೆ, ಕೃಷಿ, ಮಹಿಳಾ, ಯುವ ಗೋಷ್ಠಿಗಳು ನಡೆಯಲಿವೆ. ಮಹಾಸಭೆ ಇತಿಹಾಸ ಹಾಗೂ ಕಾರ್ಯ ಚಟುವಟಿಕೆಗಳ ಪ್ರದರ್ಶನವೂ ಇರಲಿದೆ ಎಂದು ತಿಳಿಸಿದ್ದಾರೆ.
ವೀರಶೈವ ಲಿಂಗಾಯತ ಸಮಾಜವನ್ನು ಸಂಘಟಿಸುವುದು ಅಧಿವೇಶನದ ಉದ್ದೇಶವಾಗಿದೆ. ಸಮಾಜದವರು ಅಧಿಕ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕು ಎಂದು ಹೇಳಿದ್ದಾರೆ.
ಅಧಿವೇಶನದಲ್ಲಿ ಪಾಲ್ಗೊಳ್ಳಲು ಡಿ. 10 ರ ಒಳಗೆ ಹೆಸರು ನೋಂದಣಿ ಮಾಡಿಕೊಳ್ಳಬೇಕು. ಹೆಸರು ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗೆ ಮೊಬೈಲ್ ಸಂಖ್ಯೆ 9164442557 ಗೆ ಸಂಪರ್ಕಿಸಬಹುದು ಎಂದು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net