

ಚಿತ್ರದುರ್ಗ:ರಾಜ್ಯಮಹಿಳಾ ಅಭಿವೃದ್ಧಿ ನಿಗಮ ಪ್ರಸಕ್ತ ಸಾಲಿನಲ್ಲಿ ಅನುಷ್ಠಾನಗೊಳಿಸುತ್ತಿರುವ ಚೇತನ, ಧನಶ್ರೀ,ಲಿಂಗತ್ವ ಅಲ್ಪಸಂಖ್ಯಾತರ ಪುನ ರ್ವಸತಿ,ದೇವದಾಸಿ ಪುನರ್ವಸತಿ ಹಾಗೂ ಉದ್ಯೋಗಿನಿ ಯೋಜನೆಗಳಿಗೆ ಆನ್‌ಲೈನ್ ಮೂಲಕ ಸೆಪ್ಟೆಂಬರ್ 21ರೊಳಗೆ ಅರ್ಜಿ ಆಹ್ವಾನಿಸಿದೆ. ಅರ್ಜಿದಾರರು ಬಾಪೂಜಿ ಸೇವಾ ಕೇಂದ್ರ, ಗ್ರಾಮಒನ್,ಬೆಂಗಳೂರು ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿ ಅರ್ಜಿ ಸಲ್ಲಿಸಬಹುದು.ಹೆಚ್ಚಿನ ಮಾಹಿತಿಗಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಹಾಗೂ ನಿಗಮದ ಜಿಲ್ಲಾ ಅಭಿವೃದ್ಧಿ ನಿರೀಕ್ಷಕಕರ ಕಚೇರಿ (7019967954)ಸಂಪರ್ಕಿಸಬಹುದೆಂದು ಪ್ರಕಟಣೆ ತಿಳಿಸಿದೆ.