'ಮಹಿಳಾ ಕಾಂಗ್ರೆಸ್ ನಡಿಗೆ ಅನ್ನದಾತನ ಬಳಿಗೆ'

Published on

ಬೆಂಗಳೂರು: ದೇಶಾದ್ಯಂತ ರೈತರ ಹೋರಾಟ ನಡೆಯುತ್ತಿರುವಾಗ ವಿವಿಧ ಪಕ್ಷ, ಸಂಘಟನೆಗಳು ಹೋರಾಟವನ್ನು ಬೆಂಬಲಿಸಿವೆ. ರಾಜ್ಯದ ಮಹಿಳಾ ಕಾಂಗ್ರೆಸ್ ಕೂಡ ವಿಶಿಷ್ಟ ಕಾರ್ಯಕ್ರಮ ಹಮ್ಮಿಕೊಂಡಿದೆ.

'ಮಹಿಳಾ ಕಾಂಗ್ರೆಸ್ ನಡಿಗೆ ಅನ್ನದಾತನ ಬಳಿಗೆ' ಎಂಬ ಅಭಿಯಾನ ರೂಪಿಸಿದ್ದು, ಬುಧವಾರ ಚಾಲನೆ ದೊರೆಯುತ್ತಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಬಿ. ಪುಷ್ಪಾ ಅಮರನಾಥ್, ದೇಶದ ರೈತರ ಹಿತ ಕಡೆಗಣಿಸಿ ಕೇಂದ್ರ ಸರ್ಕಾರ ರೈತ ಮರಣ ಶಾಸನ ಜಾರಿಗೆ ತರುತ್ತಿದೆ. ಇದನ್ನು ವಿರೋಧಿ ರಾಜ್ಯ ಎಲ್ಲಾ ಜಿಲ್ಲೆಗಳಲ್ಲಿ ನಮ್ಮ‌ ಪಕ್ಷದ ಮಹಿಳಾ ಘಟಕದಿಂದ ಹೋರಾಟ ಹಮ್ಮಿಕೊಳ್ಳುತ್ತಿದ್ದೇವೆ ಎಂದು ತಿಳಿಸಿದ್ದಾರೆ.

ಡಿ.16ರಂದು ಬೆಳಗ್ಗೆ 9 ಗಂಟೆಗೆ ಮೈಸೂರು ಜಿಲ್ಲೆ ಹುಣಸೂರು ರಸ್ತೆಯಲ್ಲಿ ವಿನೂತನ ಕಾರ್ಯಕ್ರಮಕ್ಕೆ ಚಾಲನೆ ಕೊಡಲಾಗುತ್ತಿದೆ ಎಂದಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net