

ಚಿತ್ರದುರ್ಗ: ನಗರ ಮಟ್ಟದ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಭಾಗವಹಿಸಿದ್ದ ಇಂಡಿಯನ್ ಇಂಟರ್‌ನ್ಯಾಷನಲ್ ರಾಜ್ಯ ಪಠ್ಯಕ್ರಮ ಶಾಲೆ ವಿದ್ಯಾರ್ಥಿಗಳು ಬಹುಮಾನಗಳನ್ನು ಪಡೆದುಕೊಂಡಿದ್ದಾರೆ. ಮಹಿಳಾ ಥ್ರೋಬಾಲ್‌ನಲ್ಲಿ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. 3 ಕಿ.ಮೀ.ನಡಿಗೆ ಸ್ಪರ್ಧೆಯಲ್ಲಿ 2,3 ನೇ ಹಾಗೂ ಶಾಟ್‌ಪುಟ್, ಲಾಂಗ್‌ಜಂಪ್‌ನಲ್ಲಿ ತೃತೀಯ ಸ್ಥಾನ ಗಳಿಸಿರುವ ವಿದ್ಯಾರ್ಥಿಗಳ ಸಾಧನೆಗೆ ದೇವರಾಜ ಅರಸು ಶಿಕ್ಷಣ ಸಂಸ್ಥೆ ಸಿಇಒ ಎಂ.ಸಿ.ರಘುಚಂದನ್ ಹರ್ಷ ವ್ಯಕ್ತಪಡಿಸಿದ್ದಾರೆ. ಮುಖ್ಯಶಿಕ್ಷಕ ತಿಪ್ಪೇ ಸ್ವಾಮಿ, ಶಿಕ್ಷಣ ಸಂಯೋಜಕ ಕೊಟ್ರೇಶ್, ಕ್ರೀಡಾ ಸಂಯೋಜಕ ಗೋವಿಂದರಾಜು, ರಾಘವೇಂದ್ರ, ಪ್ರಕಾಶ್ ಮತ್ತಿತರರು ಇದ್ದರು.