ಮಹಿಳಾ ಸಬಲೀಕರಣಕ್ಕಾಗಿ ಮತ ಚಲಾಯಿಸಿ

CTD GARMENTS----002
Published on

ಚಿತ್ರದುರ್ಗ:ಮಹಿಳಾ ಸಬಲೀಕರಣಕ್ಕಾಗಿ ನನ್ನ ಮತ,ನನ್ನ ಹಕ್ಕು ಎಂಬ ಘೋಷಣೆಯೊಂದಿಗೆ ಎಲ್ಲ ಮಹಿಳೆಯುರು ತಪ್ಪದೇ ಮತದಾನ ಮಾಡಬೇಕೆಂದು ಜಿ ಲ್ಲಾ ಸ್ವೀಪ್ ಸಮಿತಿ ಅಧ್ಯಕ್ಷ,ಜಿಪಂ ಸಿಇಒ ಎಸ್.ಜೆ ಸೋಮಶೇಖರ್ ಕರೆ ನೀಡಿದರು. ನಗರದ ಗಾರ್ಂಮೆಟ್ಸ್‌ನಲ್ಲಿ ಏರ್ಪಡಿಸಿದ್ದ ಮತದಾನ ಜಾಗೃತಿ ಕಾರ‌್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ,ಮಹಿಳೆಯರು ಕಡ್ಡಾಯವಾಗಿ ಮತದಾನ ಮಾಡಬೇಕು ಜತೆಗೆ ಕುಟುಂಬದ ವರ್ಗದವರು ಪಾಲಕರು, ಸ್ನೇಹಿತರು,ಬಂಧುಗಳಿಗೆ ಮತದಾನ ಮಾಡುವಂತೆ ಪ್ರೇರೆಪಿಸಬೇಕು. ಲೋಕಸಭಾ ಚುನಾವಣೆಗೆ ಏಪ್ರಿಲ್ 26 ರಂದು ಮತದಾನ ನಡೆಯಲಿದೆ. ಚುನಾವಣೆ ಎಂಬುದು ಪ್ರಜಾಪ್ರಭುತ್ವ ಹಬ್ಬವಾಗಿದ್ದು, ಎಲ್ಲರೂ ಮತದಾನದಲ್ಲಿ ಕಡ್ಡಾಯವಾಗಿ ಪಾಲ್ಗೊಳ್ಳಬೇಕು. ನಿರ್ಭಿತಿಯಿಂದ ಮತಗಟ್ಟೆಗೆ ಧಾವಿಸಿ ಮತದಾನ ಮಾಡುವಂತೆ ಕೋರಿದರು. ಈ ವೇಳೆ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಜಿ.ಪಂ.ಉಪ ಕಾರ್ಯದರ್ಶಿ ಕೆ.ತಿಮಪ್ಪ,ಗಾಮೆರ್ಂಟ್ಸ್ ಅಧಿಕಾರಿಗಳು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net