ಮಹಿಳಾ ಸಬಲೀಕರಣಕ್ಕೆ ಯೋಜನೆಗಳ ಸಮರ್ಪಕ ಅನುಷ್ಠಾನವಾಗಲಿ

bkt-30-3
Published on

ಬಾಗಲಕೋಟೆ: ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣಕ್ಕಾಗಿ ಸರಕಾರಿ ಜಾರಿಗೆ ತಂದಿರುವ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಧಿಕಾರಿಗಳು ಮುಂದಾಗಬೇಕು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದರು.

ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆಯ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಬಾಲ್ಯ ವಿವಾಹ ಪ್ರಗಕರಣಗಳನ್ನು ತಡೆಗಟ್ಟಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ದೊರಕಿಸುವ ನಿಟ್ಟಿನಲ್ಲಿ ಪರಿಣಾಮಕಾರಿ ಕ್ರಮ ಕೈಗೊಳ್ಳುವಂತೆ ಎಲ್ಲ ಶಿಶು ಅಭಿವೃಧ್ದಿ ಯೋಜನಾಧೀಕಾರಿಗಳಿಗೆ ಸೂಚಿಸಿದರು.

ಬಾಕಿ ಇರುವ ಪ್ರಕರಣಗಳಿಗೆ ತುರ್ತಾಗಿ ಎಫ್‍ಐಆರ್ ದಾಖಲಿಸಿ, ಅಪರಾಧಿಗಳಿಗೆ ಕಠಿಣ ಶಿಕ್ಷೆ ಆಗುವಂತೆ ಕ್ರಮ ಕೈಗೊಳ್ಳಬೇಕು. ಬಾಲ್ಯ ವಿವಾಹ ನಿಷೇಧ ಕಾಯ್ದೆ ಬಗ್ಗೆ ಸಾರ್ವಜನಿಕರಲ್ಲಿ ವ್ಯಾಪಕ ಅರಿವು ಮೂಡಿಸಿ. ಕೌಟುಂಬಿಕ ದೌರ್ಜನ್ಯ ತಡೆ ಕಾಯ್ದೆ ಅಡಿ ನೆರವು ಕೋರಿ ಬರುವ ಮಹಿಳೆಯರಿಗೆ ತುರ್ತಾಗಿ ಸ್ಪಂದಿಸಿ ಅವರಿಗೆ ಕಾನೂನು, ನೆರವು, ಆಪ್ತ ಸಮಾಲೋಚನೆ, ಪೆÇಲೀಸ್ ನೆರವು ನಿಡುವದರ ಮೂಲಕ ಸಮಸ್ಯೆಗಳನ್ನು ಇತ್ಯರ್ಥ ಪಡಿಸಲು ಪ್ರಯತ್ನಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಮಹಿಳೆಯರ ರಕ್ಷಣೆ ಮತ್ತು ಸಬಲೀಕರಣಕ್ಕಾಗಿ ಇರುವ ಸಖಿ ಕೇಂದ್ರ, ಸ್ವಾಧಾರ ಗೃಹ, ಬಾಲಕಿಯರ ವಸತಿ ನಿಲಯ ಸೇವೆಗಳನ್ನು ಅವಶ್ಯಕತೆ ಇರುವ ಮಹಿಳೆಯರಿಗೆ ಸಕಾಲದಲ್ಲಿ ಸಿಗುವಂತೆ ನೋಡಿಕೊಳ್ಳಬೇಕು. ಮೊದಲನೇ ಮತ್ತು ಎರಡನೇ ಗರ್ಭಿಣಿ ಮಹಿಳೆಯರಿಗೆ ಕ್ರಮವಾಗಿ 5000 ಹಾಗೂ 6000 ರೂಪಾಯಿಗಳ ಸಹಾಯಧನ ನೀಡುವ ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಯನ್ನು ಎಲ್ಲಾ ಅರ್ಹ ಪಲಾನುಭವಿಗಳಿಗೆ ತಲುಪಿಸಬೇಕು. ಯಾವುದೇ ಅರ್ಹ ಪಲನುಭವಿ ಯೋಜನೆಯಿಂದ ವಂಚಿತರಾಗದಂತೆ ನೋಡಿಕೊಳ್ಳಬೇಕು ಎಂದರು.

ಸಭೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃಧ್ದಿ ಇಲಾಖೆಯ ಉಪ ನಿರ್ದೇಶಕ ಅಮರೇಶ ಹೆಚ್ ನಗರಸಭೆ ಪೌರಾಯುಕ್ತ ರಮೇಶ ಜಾದವ, ಲೀಡ್ ಬ್ಯಾಂಕ್ ವ್ಯವಸ್ಥಾಪಕ ಎಂ.ಸಿ.ಮದುಸೂಧನ ಸೇರಿದಂತೆ ಶಿಶು ಅಭಿವೃದ್ದಿ ಯೋಜನಾಧಿಕಾರಿಗಳು, ಸ್ವಯಂ ಸೇವಾ ಸಂಸ್ಥೆಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net