ಮಹಿಳಾ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಗೆ ಪ್ರವೇಶ

application
Published on

ಚಿತ್ರದುರ್ಗ: ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಖಾಸಗಿ ಕೈಗಾರಿಕಾ ತರಬೇತಿ ಸಂಸ್ಥೆಗಳಿಗೆ 2024ನೇ ಶೈಕ್ಷಣಿಕ ಸಾಲಿನ ಪ್ರವೇಶಕ್ಕಾಗಿ ಜೂನ್ 3 ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ನಗರದ ಸ್ಟೇಡಿಯಂ ರಸ್ತೆ ಸರ್ಕಾರಿ ಮಹಿಳಾ ತರಬೇತಿ ಸಂಸ್ಥೆಗೆ ಪ್ರವೇಶ ಬಯಸುವ ಎಸ್ಸೆಸ್ಸೆಲ್ಸಿ ಉತ್ತೀರ್ಣ ಆಸಕ್ತ ಅಭ್ಯರ್ಥಿಗಳು  www.cite.karnataka.gov.in  ಮೂಲಕ ಅರ್ಜಿ ಸಲ್ಲಿಸಬಹುದು. ಈ ಸಂಸ್ಥೆಯ ಎಲ್ಲ ಸೀಟುಗಳು ಮಹಿಳೆಯರಿಗೆ ಮೀಸಲಾಗಿರುತ್ತವೆ. ಮಹಿಳೆಯರಿಗೆ ಹಂಚಿಕೆಯಾಗದೆ ಉಳಿದ ಸೀಟುಗಳನ್ನು ಪುರುಷರಿಗೆ ಹಂಚಿಕೆ ಮಾಡಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-234515ನ್ನು ಸಂಪರ್ಕಿಸಬಹುದು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net