

ಚಿತ್ರದುರ್ಗ: ನೆಹರು ನಗರ 1ನೇ ತಿರುವಿನ ಮನೆಯೊಂದರಲ್ಲಿ ರೇಣುಕಾ (40) ಎಂಬುವವರ ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಶುಕ್ರವಾರ ಬೆಳಕಿಗೆ ಬಂದಿದೆ. ಘಟನೆ ಬಳಿಕ ಪತಿ ಮಂಜುನಾಥ್ ನಾಪತ್ತೆಯಾಗಿದ್ದಾನೆ.
ಗುರುವಾರ ಮಧ್ಯಾಹ್ನದಿಂದ ಮಧ್ಯರಾತ್ರಿ ಅವಧಿಯೊಳಗೆ ಕೊಲೆಯಾಗಿದೆ ಎಂದು ಶಂಕಿಸಲಾಗಿದೆ. ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದರ್‌ಕುಮಾರ್ ಮೀನಾ, ಡಿವೈಎಸ್‌ಪಿ ಅನಿಲ್‌ಕುಮಾರ್ ಇನ್ನಿತರೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ರೇಣುಕಾ, ಮಂಜುನಾಥ್ 20 ವರ್ಷಗಳ ಹಿಂದೆ ವಿವಾಹವಾಗಿದ್ದು, ಇಬ್ಬರು ಪುತ್ರಿಯರು ಇದ್ದು, ಒಬ್ಬರ ವಿವಾಹವಾಗಿದೆ. ಇನ್ನೊಬ್ಬ ಯುವತಿ ಉದ್ಯೋಗದಲ್ಲಿದ್ದು, ಇಬ್ಬರೂ ಬೆಂಗಳೂರಿನಲ್ಲಿದ್ದಾರೆ.
ಪತಿ-ಪತ್ನಿಯ ನಡುವೆ ಆಗಿಂದಾಗ್ಗೆ ಗಲಾಟೆ ನಡೆಯುತ್ತಿತ್ತು ಎಂಬ ಮಾಹಿತಿಯನ್ನು ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಕೌಟುಂಬಿಕ ಕಲಹದ ಕಾರಣಕ್ಕೆ ಪತಿಯೇ ಕೊಲೆ ಮಾಡಿ, ಮನೆಗೆ ಬೀಗ ಹಾಕಿಕೊಂಡು ಪರಾರಿಯಾಗಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.