

ಚಿತ್ರದುರ್ಗ: ತಾಲೂಕಿನ ಚಿಕ್ಕಂದವಾಡಿ ಗ್ರಾಮದ ಸುಂದರಮ್ಮ (54) ಎಂಬುವವರನ್ನು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಮೃತ ದೇಹವೂ ಮನೆಯಿಂದ ಒಂದೂವರೆ ಕಿ.ಮೀ. ದೂರದಲ್ಲಿ ಪತ್ತೆಯಾಗಿದೆ.
ಪೊಲೀಸರ ತಂಡ ಭೇಟಿ ನೀಡಿ ಪರಿಶೀಲಿಸಿದೆ. ಶ್ವಾನದಳ ತಂಡವೂ ಪರೀಕ್ಷೆ ನಡೆಸಿದೆ. ಮುಖ ಮತ್ತು ಗಂಟಲು ಭಾಗದಲ್ಲಿ ಬಲವಾದ ಪೆಟ್ಟು ಬಿದ್ದಿರುವುದು ಪ್ರಾಥಮಿಕ ತನಿಖೆ ವೇಳೆ ಕಂಡುಬಂದಿದೆ. ತನಿಖೆ ಮುಂದುವರಿದಿದೆ ಎಂದು ಎಸ್‌ಪಿ ಧರ್ಮೇಂದರ್‌ಕುಮಾರ್ ಮೀನಾ ತಿಳಿಸಿದ್ದಾರೆ.