

ಮಳವಳ್ಳಿ: ತಾಲೂಕಿನ ನೆಟ್ಕಲ್ ಗ್ರಾಮದಲ್ಲಿ ವಾಯುವಿಹಾರಕ್ಕೆ ತೆರಳಿದ್ದ ಮಹಿಳೆಯ ಮಾಂಗಲ್ಯ ಸರವನ್ನು ಬುಧವಾರ ಕಳ್ಳರು ಕಸಿದುಕೊಂಡು ಪರಾರಿಯಾಗಿದ್ದಾರೆ.
ಗ್ರಾಮದ ಅಂಕಯ್ಯ ಎಂಬುವರ ಪತ್ನಿ ಚೆನ್ನಾಜಮ್ಮ ಸರ ಕಳೆದುಕೊಂಡ ಮಹಿಳೆ. ಗ್ರಾಮದ ಹೊರವಲಯದ ಶಿಂಷಾ ರಸ್ತೆಯಲ್ಲಿ ವಾಯುವಿಹಾರಕ್ಕೆ ಹೋಗಿದ್ದರು. ಕಾಡಂಚಿನ ಗ್ರಾಮವಾಗಿರುವ ಹಿನ್ನೆಲೆಯಲ್ಲಿ ನಿರ್ಜನ ಪ್ರದೇಶವಾಗಿದ್ದರಿಂದ ಹಿಂಬದಿಯಿಂದ ಬೈಕ್‌ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ವಿಳಾಸ ಕೇಳುವ ನೆಪದಲ್ಲಿ ಗಮನ ಬೇರೆಡೆ ಸೆಳೆದು ಕತ್ತಿನಲ್ಲಿದ್ದ ಸುಮಾರು 15 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಿತ್ತು ಪರಾರಿಯಾಗಿದ್ದಾರೆ.
ವಿಷಯ ತಿಳಿದು ಸಿಪಿಐ ಶ್ರೀಧರ್ ಹಾಗೂ ಪಿಎಸ್‌ಐ ಅಶೋಕ್ ಸ್ಥಳಕ್ಕೆ ಭೇಟಿ ನೀಡಿ ಮಾಹಿತಿ ಪಡೆದಿದ್ದಾರೆ. ಈ ಸಂಬಂಧ ಬೆಳಕವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.