

ಗುಂಡ್ಲುಪೇಟೆ: ಪುರುಷರ ಸಹಕಾರವಿದ್ದರೆ ಮಹಿಳೆಯರು ಅಭಿವೃದ್ಧಿ ಹೊಂದಲು ಸಾಧ್ಯವಾಗುತ್ತದೆ ಎಂದು ಜಿಲ್ಲಾ ಹೆಚ್ಚುವರಿ ನ್ಯಾಯಾಧೀಶೆ ನಿಶಾ ರಾಣಿ ಅಭಿಪ್ರಾಯಪಟ್ಟರು.
ಪಟ್ಟಣದ ನ್ಯಾಯಾಲಯದಲ್ಲಿ ಶುಕ್ರವಾರ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು. ಇತ್ತೀಚಿನ ವರ್ಷಗಳಲ್ಲಿ ಮಹಿಳೆಯರು ಎಲ್ಲ ರಂಗಗಳಲ್ಲಿಯೂ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಉತ್ತಮ ಪುರುಷರ ಬೆಂಬಲದಿಂದ ತಾವು ಹೆಚ್ಚಿನ ಪ್ರಾಮಾಣಿಕತೆ ಹಾಗೂ ದಕ್ಷತೆಯಿಂದ ಕಾರ್ಯನಿರ್ವಹಿಸುತ್ತಿದ್ದಾರೆ ಎಂದು ಹೇಳಿದರು.
ಹಿರಿಯ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಬಸವರಾಜ ತಳವಾರ್, ಪ್ರಧಾನ ಸಿವಿಲ್ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶರಾದ ಶಿವಕುಮಾರ್, ಹೆಚ್ಚುವರಿ ಹಾಗೂ ಜೆಎಂಎಫ್‌ಸಿ ನ್ಯಾಯಾಧೀಶೆ ಎಂ.ಎಂ. ಕಾಂತಮ್ಮ, ವಕೀಲರ ಸಂಘದ ಅಧ್ಯಕ್ಷ ಟಿ.ಎಸ್.ವೆಂಕಟೇಶ್ ಇದ್ದರು.