ಮಹಿಳೆಯರ ಆರ್ಥಿಕ ಸದೃಢತೆಗೆ ಕರವಸೂಲಿ ಸಹಕಾರಿ

12 ckm 5
ಚಿಕ್ಕಮಗಳೂರು ನಗರಸಭೆ ಸಭಾಂಗಣದಲ್ಲಿ ನಡೆದ ಆಸ್ತಿ ತೆರಿಗೆ ನೀರಿನ ಶುಲ್ಕವನ್ನು ವಸೂಲಾತಿ ಸಂಗ್ರಹಣೆ ಮಾಡುವ ಬಗ್ಗೆ ಅರಿವು ಕಾರ್ಯಕ್ರಮವನ್ನು ಉದ್ಘಾಟಿಸಿ ನಗರಸಭೆ ಅಧ್ಯಕ್ಷೆ ಸುಜಾತ ಶಿವಕುಮಾರ್ ಮಾತನಾಡಿದರು. ಬಿ.ಸಿ.ಬಸವರಾಜ್, ಚಂದ್ರಶೇಖರಪ್ಪ ಮತ್ತಿತರರಿದ್ದರು.
Published on

ಚಿಕ್ಕಮಗಳೂರು: ಸಮಾಜದಲ್ಲಿ ಮಹಿಳೆಯರು ಆರ್ಥಿಕ ಸಬಲ-ಪ್ರಬಲರಾಗಬೇಕು ಎಂಬ ಗುರಿಯೊಂದಿಗೆ ಸ್ವಸಹಾಯ ಸಂಘಗಳ ಮಹಿಳೆಯರಿಗೆ ನಗರಸಭೆ ವ್ಯಾಪ್ತಿಯಲ್ಲಿ ಆಸ್ತಿ ತೆರಿಗೆ ವಸೂಲಿ ಮಾಡುವ ಬಗ್ಗೆ ಅರಿವು ಮೂಡಿಸಲಾಗುತ್ತಿದೆ ಎಂದು ನಗರಸಭೆ ಅಧ್ಯಕ್ಷೆ ಸುಜಾತಾ ಶಿವಕುಮಾರ್ ತಿಳಿಸಿದರು.

ನಗರದ ನಗರಸಭೆ ಸಭಾಂಗಣದಲ್ಲಿ ಬುಧವಾರ ನಗರಾಭಿವೃದ್ಧಿ ಇಲಾಖೆ, ಪೌರಾಡಳಿತ ನಿರ್ದೇಶನಾಲಯದ ಮಾರ್ಗಸೂಚಿಯಂತೆ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಸಮರ್ಪಕ ವಸೂಲಾತಿಗಾಗಿ ಡೇನಲ್ಮ್ ಅಭಿಯಾನದಡಿ ರಾಜ್ಯದ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಬರುವ ಅರ್ಹ ಮಹಿಳಾ ಸ್ವಸಹಾಯ ಸಂಘಗಳನ್ನು ತೊಡಗಿಸಿಕೊಂಡು ಆಸ್ತಿ ತೆರಿಗೆ ನೀರಿನ ಶುಲ್ಕವನ್ನು ವಸೂಲಾತಿ ಸಂಗ್ರಹಣೆ ಮಾಡುವ ಬಗ್ಗೆ ಅರಿವು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಗರಸಭೆ ವ್ಯಾಪ್ತಿಯ ಆಯಾ ವಾರ್ಡಿನ ಸ್ತಿçÃಶಕ್ತಿ ಸ್ವಸಹಾಯ ಸಂಘಗಳು ಕಂದಾಯ ಮತ್ತು ನೀರಿನ ಕರ ವಸೂಲಿ ಮಾಡಿದರೆ ಶೇ.೫ ರಷ್ಟು ಹಣವನ್ನು ಆ ಸಂಘಕ್ಕೆ ನೀಡಲು ಯೋಜನೆ ರೂಪಿಸಲಾಗಿದೆ. ಅಂದು ಸಂಗ್ರಹಿಸಿದ ಹಣವನ್ನು ಅಂದೇ ನಗರಸಭೆಗೆ ಪಾವತಿ ಮಾಡಲು ಪೇಟಿಎಂ ಮೂಲಕ ಅವಕಾಶ ಕಲ್ಪಿಸಲಾಗಿದೆ ಎಂದರು.

ಸAಗ್ರಹಿಸಲಾದ ಕಂದಾಯ ಹಣವನ್ನು ನಿಗದಿತ ಸಮಯದಲ್ಲಿ ಪಾವತಿ ಮಾಡಬೇಕು. ಇದನ್ನು ದುರುಪಯೋಗಪಡಿಸಿಕೊಂಡರೆ ಪೊಲೀಸ್ ಇಲಾಖೆ ಮೂಲಕ ನಗರಸಭೆ ಆಯುಕ್ತರು ಮತ್ತು ಸಿಬ್ಬಂದಿ ಪ್ರಕರಣ ದಾಖಲಿಸಿ ದಂಡ ವಿಧಿಸಲು ಅವಕಾಶವಿದೆ. ಇದಕ್ಕೆ ಅವಕಾಶ ಕೊಡದಂತೆ ಕೆಲಸ ಮಾಡಬೇಕು ಎಂದು ಎಚ್ಚರಿಸಿದರು.

ಕರ ವಸೂಲಾತಿಗೆ ಹೋಗುವ ಮಹಿಳೆಯರಿಗೆ ನಗರಸಭೆಯಿಂದ ಗುರುತಿನ ಚೀಟಿ ನೀಡಲಾಗುವುದು. ವಾರ್ಡಿನಲ್ಲಿ ವಾಸಿಸುವ ನಾಗರಿಕರ ಪರಿಚಯ ಸ್ಥಳೀಯ ಸ್ವಸಹಾಯ ಸಂಘದ ಪದಾಧಿಕಾರಿಗಳಿಗೆ ಇರುವುದರಿಂದ ಮೋಸ ಹೋಗುವ ಪ್ರಶ್ನೆಯೇ ಉದ್ಭವಿಸುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕಂದಾಯ ವಸೂಲಾತಿ ಕಾರ್ಯದಲ್ಲಿ ಮಹಿಳೆಯರು ತೊಡಗಿಸಿಕೊಳ್ಳುವುದರಿಂದ ನಗರಸಭೆ ಅಧಿಕಾರಿ ಎಂಬುವುದರ ಜೊತೆಗೆ ಆರ್ಥಿಕ ಸದೃಢರಾಗಲು ಸಹಕಾರಿಯಾಗಲಿದೆ ಎಂದು ಹೇಳಿದರು.

ನಗರಸಭೆ ಸಿಬ್ಬಂದಿ ಕಂದಾಯ ವಸೂಲಾತಿಗೆ ಹೋದರೆ ಸಾರ್ವಜನಿಕರ ಕೆಲಸಕ್ಕೆ ತೊಂದರೆಯಾಗುತ್ತದೆ ಎಂಬ ಹಿನ್ನೆಲೆಯಲ್ಲಿ ಸ್ತಿçÃಶಕ್ತಿ ಸ್ವಸಹಾಯ ಗುಂಪಿನ ಮಹಿಳೆಯರ ಮೂಲಕ ಕಂದಾಯ ವಸೂಲಿ ಮಾಡಲು ಸರ್ಕಾರ ಆದೇಶಿಸಿರುವ ಹಿನ್ನೆಲೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಇದರಿಂದ ಮಹಿಳೆಯರು ಆರ್ಥಿಕ ಸ್ವಾವಲಂಬಿಗಳಾಗಲಿ ಎಂದು ಹಾರೈಸಿದರು.

ನಗರಸಭೆ ಆಯುಕ್ತ ಬಿ.ಸಿ. ಬಸವರಾಜ್ ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ ಕಂದಾಯ ಬಾಕಿ, ಚಾಲ್ತಿ ವಸೂಲಾತಿಗೆ ಸಂಬAಧಿಸಿದAತೆ ಸರ್ಕಾರ ಮಾರ್ಗಸೂಚಿ ಹೊರಡಿಸಿದೆ. ಅದರಂತೆ ಸ್ಥಳೀಯ ಮಹಿಳಾ ಸ್ತಿçÃಶಕ್ತಿ ಸ್ವಸಹಾಯ ಸಂಘಗಳ ಮೂಲಕ ಕಂದಾಯ ವಸೂಲಾತಿಗೆ ಕ್ರಮವಹಿಸಲಾಗಿದೆ. ಸಂಗ್ರಹ ಮಾಡಿದ ಹಣಕ್ಕೆ ಶೇ. ೫ರಷ್ಟು ಪ್ರೋತ್ಸಾಹಧನ ನೀಡಲು ನಿರ್ಧರಿಸಲಾಗಿದೆ ಎಂದರು.

ನಗರಸಭೆ ವ್ಯಾಪ್ತಿಯ ೩೫ ವಾರ್ಡಿನ ಎಲ್ಲಾ ಸ್ವಸಹಾಯ ಸಂಘಗಳ ಪದಾಧಿಕಾರಿಗಳನ್ನು ಆಹ್ವಾನಿಸಿ ಕಂದಾಯ ವಸೂಲಾತಿ ಕುರಿತು ಅರಿವು ಮೂಡಿಸಲಾಗಿದೆ. ಈ ಮೂಲಕ ಮಹಿಳೆಯರ ಆರ್ಥಿಕ ಸದೃಢತೆಗೆ ಹೆಚ್ಚಿನ ಕಾಳಜಿ ವಹಿಸಲಾಗಿದೆ ಎಂದು ಹೇಳಿದರು.

ಫೆ. ೨೦ರ ನಂತರ ವಾರ್ಡ್ವಾರು ಸಭೆ ನಡೆಸಿ ಸಾರ್ವಜನಿಕರಿಗೆ ಮನವರಿಕೆ ಮಾಡುವ ಬಗ್ಗೆ ಅಗತ್ಯ ಮಾಹಿತಿ ನೀಡಲಾಗುವುದು. ಏ. ೧ರಿಂದ ಆಸ್ತಿ ಮತ್ತು ನೀರಿನ ತೆರಿಗೆ ವಸೂಲಾತಿ ಕಾರ್ಯ ಆರಂಭವಾಗಲಿದೆ ಎಂದು ತಿಳಿಸಿದರು.

ಸಮುದಾಯ ಸಂಘಟನಾಧಿಕಾರಿ ಚಂದ್ರಶೇಖರಪ್ಪ ಮಾತನಾಡಿ, ನಗರಸಭೆ ವ್ಯಾಪ್ತಿಯಲ್ಲಿ ಡೇನಲ್ಮ್ ಯೋಜನೆಯಡಿ ರಚನೆಯಾಗಿರುವ ಅರ್ಹ ಆಸಕ್ತ ಸ್ವಸಹಾಯ ಸಂಘಗಳಿAದ ಆಸ್ತಿ ತೆರಿಗೆ ಮತ್ತು ನೀರಿನ ಶುಲ್ಕ ಸಮರ್ಪಕ ವಸೂಲಾತಿಗಾಗಿ ಕರ ಸಂಗ್ರಹಣೆಗೆ ಸರ್ಕಾರ ಈ ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಿದೆ ಎಂದು ಹೇಳಿದರು.

ಇದರಂತೆ ನಗರದ ಸ್ವಸಹಾಯ ಸಂಘಗಳಿAದ ಅರ್ಜಿಗಳನ್ನು ಆಹ್ವಾನಿಸಿದ್ದು, ಈಗಾಗಲೇ ೧೫ ಸ್ವಸಹಾಯ ಸಂಘಗಳಿAದ ಅರ್ಜಿಗಳು ಬಂದಿವೆ. ಉಳಿದಂತೆ ಯಾವುದೇ ಅರ್ಜಿಗಳು ಬರದ ಹಿನ್ನೆಲೆಯಲ್ಲಿ ಇಂದು ಸುಮಾರು ೬೦ ಸ್ವಸಹಾಯ ಸಂಘಗಳನ್ನು ಆಹ್ವಾನಿಸಿ ಅರಿವು ಮೂಡಿಸಲಾಗಿದೆ ಎಂದರು.

ಈ ಕಾರ್ಯಕ್ರಮದಲ್ಲಿ ಕಂದಾಯ ಶಾಖೆಯ ಶಿವಾನಂದ, ಸಿಆರ್‌ಪಿ ಹಾಗೂ ನಗರಸಭೆ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net