ಮಹಿಳೆಯರ ಮೇಲೆ ದೌರ್ಜನ್ಯ ಹೆಚ್ಚಳ

ctd---0001..
Published on

ಚಿತ್ರದುರ್ಗ: ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳು ಹೆಚ್ಚಳವಾಗಿರುವುದು ಕಳವಳಕಾರಿ ಸಂಗತಿ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರೋಣ ವಾಸುದೇವ ಅವರು ಹೇಳಿದರು.
ರಾಷ್ಟ್ರೀಯ ಮಹಿಳಾ ಆಯೋಗ ಹಾಗೂ ಕಾನೂನು ಸೇವಾ ಪ್ರಾಧಿಕಾರ ಸಹಯೋಗದೊಂದಿಗೆ ಜಿಪಂದಲ್ಲಿ ಬುಧವಾರ ಆಯೋಜಿಸಿದ್ದ ವಿಧಾನ್ ಸೇ ಸಮಾಧಾನ್ ಕಾನೂನು ಅರಿವು ಕಾರ‌್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಸಂವಿಧಾನದ ಮೂಲ ಕರ್ತವ್ಯಗಳಲ್ಲಿ ಮಹಿಳೆಯರ ಗೌರವಕ್ಕೆ ಚ್ಯುತಿ ಬರದ ಹಾಗೆ ನಡೆದುಕೊಳ್ಳಬೇಕೆಂದು ಹೇಳಲಾಗಿದೆ. ಆದಾ ಗ್ಯೂ ದೇಶದಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯ ಕಡಿಮೆ ಆಗಿಲ್ಲ. ಮೂಲ ಹಕ್ಕುಗಳನ್ನು ಕೇಳುವ ನಾವು ಕರ್ತವ್ಯಗಳನ್ನೂ ತಪ್ಪದೇ ಪಾಲಿ ಸಬೇಕು. ಸ್ವಾತಂತ್ರ್ಯಪೂರ್ವದಲ್ಲಿ ಸತಿ ಪದ್ಧತಿ ನಿಷೇಧ ಕಾನೂನು ಜಾರಿಗೆ ತರಲಾಗಿದೆ. ಸ್ವಾತಂತ್ರ್ಯನಂತರ 16 ಪ್ರಮುಖ ಕಾಯ್ದೆಗಳನ್ನು ಮಹಿಳೆಯರ ಸಬಲೀಕರಣ, ರಕ್ಷಣೆಗಾಗಿ ಜಾರಿಗೆ ತರಲಾಗಿದೆ ಎಂದರು.
ಹಿಂದು ಉತ್ತರಾಧಿಕಾರಿ ಕಾಯ್ದೆ ಪಿತ್ರಾರ್ಜಿತ ಆಸ್ತಿಯಲ್ಲಿ ಮಹಿಳೆಯರಿಗೆ ಪಾಲು ನೀಡಿದೆ. ಪೋಷಕತ್ವದ ಹಕ್ಕು ನೀಡಲಾಗಿದೆ. ಸಮಾ ನ ವೇತನ ಹಾಗೂ ತಾಯ್ತನದ ಸೌಲಭ್ಯ ಕಾಯ್ದೆ ಜಾರಿ ಮಾಡಲಾಗಿದ್ದು, ರಕ್ಷಣೆ ಹಾಗೂ ಹಕ್ಕುಗಳೆಡೆ ಹೆಚ್ಚಿನ ಜಾಗೃತಿ ಮೂಡಿಸುವ ಅಗತ್ಯವಿದೆ ಎಂದರು.
ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಸದಸ್ಯ ಕಾರ‌್ಯದರ್ಶಿ ಎಂ.ವಿಜಯ್ ಮಾತನಾಡಿ, ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರ ಹಾ ಗೂ ರಾಷ್ಟ್ರೀಯ ಮಹಿಳಾ ಆಯೋಗದಿಂದ ವಿಧಾನ್ ಸೇ ಸಮಾಧಾನ್ ಎಂಬ ಜಾಗೃತಿ ಕಾರ್ಯಕ್ರಮ ಆಯೋಜಿಸಲಾಗಿದೆ. ಮೊದಲ ಹಂತದಲ್ಲಿ 11 ರಾಜ್ಯಗಳನ್ನು ಆಯ್ದುಕೊಳ್ಳಲಾಗಿದೆ ಎಂದರು.
ಜಿಪಂ ಸಿಇಒ ಎಸ್.ಜೆ.ಸೋಮಶೇಖರ್ ಮಾತನಾಡಿದರು. ಸರಸ್ವತಿ ಕಾನೂನು ಕಾಲೇಜು ಸಹಾಯಕ ಪ್ರಾಧ್ಯಾಪಕ ಡಾ.ಎನ್.ಡಿ. ಗೌಡ, ಮನೋವೈದ್ಯ ಡಾ.ಮಂಜುನಾಥ್, ಜಿಲ್ಲಾ ಅಭಿರಕ್ಷಕ ಎಂ.ಮೂರ್ತಿ, ಸೈಬರ್ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ವೆಂಕಟೇಶ್ ಉಪನ್ಯಾಸ ನೀಡಿದರು.
ಈ ಸಂದರ್ಭದಲ್ಲಿ ರಾಷ್ಟ್ರೀಯ ಕಾನೂನು ಸೇವಾ ಪ್ರಾಧಿಕಾರದ ಉಚಿತ ಸಹಾಯವಾಣಿ ಸಂಖ್ಯೆ 15100 ನ್ನು ಬಿಡುಗಡೆ ಮಾಡಲಾ ಯಿತು. ವಕೀಲರ ಸಂಘದ ಅಧ್ಯಕ್ಷ ತಿಪ್ಪೇಸ್ವಾಮಿ, ಸರಸ್ವತಿ ಕಾನೂನು ಕಾಲೇಜು ಪ್ರಾಚಾರ‌್ಯೆ ಸುಧಾದೇವಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಭಾರತಿ ಆರ್.ಬಣಕಾರ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net