ಮಹಿಳೆಯರಿಂದ ಅರ್ಜಿ ಆಹ್ವಾನ

Application
Published on

ಚಾಮರಾಜನಗರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ (ಸಿಡಾಕ್), ಧಾರವಾಡ ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ ಚಾಮರಾಜನಗರ ಸಹಯೋಗದಲ್ಲಿ ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಆಸಕ್ತ ಮಹಿಳೆಯರಿಗಾಗಿ ಹತ್ತು ದಿನಗಳ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ (ಇಡಿಪಿ) ಕಾರ್ಯಕ್ರಮವನ್ನು ಅಕ್ಟೋಬರ್ ತಿಂಗಳ ಮೂರನೇ ವಾರದಲ್ಲಿ ಹಮ್ಮಿಕೊಳ್ಳಲಾಗಿದ್ದು, ಆಸಕ್ತ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ.

ಕಾರ್ಯಕ್ರಮದಲ್ಲಿ ಉದ್ಯಮಶೀಲತಾ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು ಹಾಗೂ ಪ್ರೋತ್ಸಾಹ, ಮಹಿಳಾ ಉದ್ಯಮದಾರರಿಗೆ ದೊರೆಯುವ ಸೌಲಭ್ಯಗಳು, ಮಾರುಕಟ್ಟೆ, ಕೈಗಾರಿಕೆ ಹಾಗೂ ಇತರೆ ವಿಷಯಗಳ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಗುವುದು. ಆಸಕ್ತ ಮಹಿಳಾ ಅಭ್ಯರ್ಥಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆಯಬಹುದು.

ಅರ್ಜಿ ಸಲ್ಲಿಸುವ ಮಹಿಳೆಯರು ಕನಿಷ್ಠ 21 ವರ್ಷ ಮೇಲ್ಪಟ್ಟವರಾಗಿರಬೇಕು. 10ನೇ ತರಗತಿ ಉತ್ತೀರ್ಣರಾಗಿರಬೇಕು. ಅರ್ಜಿಯನ್ನು ನಗರದ ಜಿಲ್ಲಾಡಳಿತ ಭವನದ 3ನೇ ಮಹಡಿಯಲ್ಲಿರುವ ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕರ ಕಚೇರಿಯಲ್ಲಿ (ಕೊಠಡಿ ಸಂಖ್ಯೆ 323) ಪಡೆದು ಅ.13ರೊಳಗೆ ಸಲ್ಲಿಸಬೇಕು ಅಥವಾ ಕರೆ ಮೂಲಕ ಹೆಸರು ನೋಂದಾಯಿಸಬಹುದು. ಹೆಚ್ಚಿನ ಮಾಹಿತಿಗಾಗಿ ಸಿಡಾಕ್‌ನ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net