ಮಹಿಳೆಯರಿಗೆ ಅರಶಿಣ, ಕುಂಕುಮ ವಿತರಣೆ

25-08-Shiva-4
ರಾಯಚೂರು ತಾಲೂಕಿನ ದೇವಸುಗೂರಿನ ಸುಗೂರೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬದ ನಿಮಿತ್ತ ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮಹಿಳೆಯರಿಗೆ ಶುಕ್ರವಾರ ಅರಿಶಿಣ, ಕುಂಕುಮ, ಬಳೆಗಳನ್ನು ವಿತರಿಸಿದರು. ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಪಿಎಸ್‌ಐ ಸೌಮ್ಯಾ ಇದ್ದರು.
Published on

ರಾಯಚೂರು: ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೊಳಪಡುವ ತಾಲೂಕಿನ ದೇವಸುಗೂರಿನ ಸುಗೂರೇಶ್ವರ ದೇವಸ್ಥಾನದಲ್ಲಿ ವರಮಹಾಲಕ್ಷ್ಮಿ ಹಬ್ಬದ ನಿಮಿತ್ತ ದೇವಸ್ಥಾನಕ್ಕೆ ಬಂದ ಮಹಿಳೆಯರಿಗೆ ಶುಕ್ರವಾರ ಅರಿಶಿಣ, ಕುಂಕು, ಹಸಿರು ಬಳೆಗಳನ್ನು ನೀಡಲಾಯಿತು.
ವರಮಹಾಲಕ್ಷ್ಮಿ ಹಬ್ಬದ ನಿಮಿತ್ತ ಪ್ರಸಾದ ರೂಪವಾಗಿ ಅರಿಶಿಣ, ಕುಂಕುಮ, ಬಳೆಗಳನ್ನು ಸರ್ಕಾರದ ಲಾಂಛನದೊಂದಿಗೆ ದೇವಸ್ಥಾನದ ಹೆಸರು ಮುದ್ರಿಸಿ ಮಹಿಳೆಯರಿಗೆ ವಿತರಿಸಬೇಕು ಎನ್ನುವ ಸರ್ಕಾರದ ಸುತ್ತೋಲೆ ಹಿನ್ನೆಲೆಯಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದೇವಸ್ಥಾನದಲ್ಲಿ ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್ ಮಹಿಳೆಯರಿಗೆ ಅರಿಶಿಣ, ಕುಂಕುಂ, ಹಸಿರು ಬಳೆಗಳನ್ನು ನೀಡಿ ವರ ಮಹಾಲಕ್ಷ್ಮಿ ಹಬ್ಬದ ಶುಭಾಷಯಗಳನ್ನು ಕೋರಿದರು. ಈ ಸಂದರ್ಭದಲ್ಲಿ ಅಪರ ಜಿಲ್ಲಾಕಾರಿ ಡಾ.ಕೆ.ಆರ್.ದುರಗೇಶ, ಶಕ್ತಿನಗರ ಠಾಣೆ ಪಿಎಸ್‌ಐ ಸೌಮ್ಯಾ ಹಾಗೂ ದೇವಸ್ಥಾನದ ಸಿಬ್ಬಂದಿ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net