

ಶನಿವಾರಸಂತೆ: ಮಹಿಳೆಯರು ಇಂದು ಪ್ರತಿಯೊಂದು ಕ್ಷೇತ್ರದಲ್ಲಿ ದುಡಿಯುತ್ತಿದ್ದಾರೆ. ಶೈಕ್ಷಣಿಕ, ಆರ್ಥಿಕ, ಸಾಮಾಜಿಕವಾಗಿಯೂ ಸಬಲರಾಗುತ್ತಿದ್ದು, ಈ ದಿಸೆಯಲ್ಲಿ ಮಹಿಳೆಯರಿಗೆ ಎಲ್ಲ ಕ್ಷೇತ್ರಗಳಲ್ಲಿಯೂ ಸರಿ ಸಮಾನವಾದ ಅವಕಾಶ ದೊರೆಯಬೇಕಿದೆ ಎಂದು ದುಂಡಳ್ಳಿ ಗ್ರಾಮ ಪಂಚಾಯಿತಿಯ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕಿ ಎಸ್.ಪಿ.ದಿವ್ಯಾ ಹೇಳಿದರು.
ಸಮೀಪದ ದುಂಡಳ್ಳಿ ಗ್ರಾಮ ಪಂಚಾಯಿತಿ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದಲ್ಲಿ ಇತ್ತೀಚೆಗೆ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. ಮಹಿಳೆಯರಿಗೆ ಸಮಾನ ಅವಕಾಶ, ಸಮಾಜದಲ್ಲಿ ಸ್ಥಾನಮಾನ ಸಿಗಬೇಕೆಂಬ ಉದ್ದೇಶದಿಂದ ಮಹಿಳಾ ದಿನವನ್ನು ವಿಶ್ವಮಟ್ಟದಲ್ಲಿ ಆಚರಿಸಲಾಗುತ್ತಿದೆ ಎಂದರು.
ಸ್ವ ಸಹಾಯ ಸಂಘದ ಅಧ್ಯಕ್ಷೆ ಮೀನಾಕ್ಷಿ, ಗ್ರಾಪಂ ಡೇಟಾ ಎಂಟ್ರಿ ಆಪರೇಟರ್ ಪೂರ್ಣಿಮಾ, ಅಂಗನವಾಡಿ ಕಾರ್ಯಕರ್ತೆ ಅಶ್ವಿನಿ, ಕೃಷಿ ಇಲಾಖೆಯ ವೇದಪ್ರಿಯಾ, ಕಾಯಕಮಿತ್ರ ಶ್ರೀದೇವಿ, ಪ್ರಮುಖರಾದ ಭಾರತಿ, ಚಂದ್ರಕಲಾ, ಜಯಮ್ಮ, ಪವಿತ್ರಾ ಹಾಗೂ ಪುಟಾಣಿಗಳು ಪಾಲ್ಗೊಂಡಿದ್ದರು.