ಮಹಿಳೆಯರಿಗೆ ಕಾನೂನಿನ ಅರಿವು ಅಗತ್ಯ

hdl
ಹೂವಿನಹಡಗಲಿಯ ಸೊಪ್ಪಿನ ಕಾಳಮ್ಮ ಬಾಲಕಿಯರ ಪಿಯು ಕಾಲೇಜಿನಲ್ಲಿ ಗುರುವಾರ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮವನ್ನು ನಿವೃತ್ತ ಸರ್ಕಾರಿ ಕಾಳಿಂಗರಾವ್ ಉದ್ಘಾಟಿಸಿದರು. ಸರ್ಕಾರಿ ಸಹಾಯಕ ಅಭಿಯೋಜಕ ಕೆ.ಅಜ್ಜಯ್ಯ, ತಾಲೂಕು ವಕೀಲರ ಸಂಘದ ಅಧ್ಯಕ್ಷ ವಸಂತಕುಮಾರ ಜಿ, ಪ್ರಾಚಾರ್ಯ ಚಂದ್ರೆಗೌಡ, ವಕೀಲರಾದ ಅಟವಾಳಗಿ ಕೊಟ್ರೇಶ್, ಎಂ.ಪಿ.ಎಂ.ಪ್ರಸನ್ನಕುಮಾರ್ ಇತರರಿದ್ದರು.
Published on

ಹೂವಿನಹಗಡಲಿ: ಮಹಿಳೆಯರು ತಮಗಾಗಿ ಇರುವ ಕಾನೂನು ಬಗ್ಗೆ ತಿಳಿದುಕೊಳ್ಳುವ ಮೂಲಕ ಭವಿಷ್ಯದಲ್ಲಿ ಉನ್ನತ ಸ್ಥಾನ ಪಡೆಯಲು ಮುಂದಾಗಬೇಕು ಎಂದು ಸರ್ಕಾರಿ ಸಹಾಯಕ ಅಭಿಯೋಜಕ ಕೆ.ಅಜ್ಜಯ್ಯ ಹೇಳಿದರು.


ಪಟ್ಟಣದ ಸೊಪ್ಪಿನ ಕಾಳಮ್ಮ ಬಾಲಕಿಯರ ಪಿಯು ಕಾಲೇಜಿನಲ್ಲಿ ತಾಲೂಕು ಕಾನೂನು ಸೇವಾ ಸಮಿತಿ, ತಾಲೂಕು ಆಡಳಿತ ಹಾಗೂ ತಾಲೂಕು ವಕೀಲರ ಸಂಘದ ಸಹಯೋಗದಲ್ಲಿ ಗುರುವಾರ ಆಯೋಜಿಸಿದ್ದ ಕಾನೂನು ಅರಿವು-ನೆರವು ಕಾರ್ಯಕ್ರಮದಲ್ಲಿ ಮಾತನಾಡಿದರು.


ಭಾರತದ ಸಂವಿಧಾನದಲ್ಲಿನ ಕಾನೂನು ಮತ್ತು ಮೂಲಭೂತ ಹಕ್ಕುಗಳನ್ನು ಮಹಿಳೆಯರು ತಿಳಿದುಕೊಳ್ಳಬೇಕು. ಪ್ರತಿಯೊಬ್ಬ ವಿದ್ಯಾರ್ಥಿನಿಯು ಕಾನೂನಿನ ಅರಿವಿನಿಂದ ಉತ್ತಮವಾದ ಭವಿಷ್ಯವನ್ನು ರೂಪಿಸಿಕೊಳ್ಳಬೇಕು. ಬಾಲ್ಯವಿವಾಹ ಪದ್ಧತಿ ನಿರ್ಮೂಲನೆ, ಜನನ ಮತ್ತು ಮರಣ ನೋಂದಣಿ, ಸಂವಿಧಾನದ ಅಡಿಯಲ್ಲಿ ಬರುವ ಕಾಯ್ದೆಗಳ ಮಾಹಿತಿ ಪಡೆದು, ಉತ್ತಮ ಸಮಾಜ ನಿರ್ಮಿಸಲು ಮುಂದಾಗಬೇಕು ಎಂದರು.


ನಿವೃತ್ತ ಸರ್ಕಾರಿ ಅಭಿಯೋಜಕ ಕಾಳಿಂಗರಾವ್, ತಾಲೂಕು ವಕೀಲರ ಸಂಘದ ಅಧ್ಯಕ್ಷ ವಸಂತಕುಮಾರ ಜಿ, ವಕೀಲರಾದ ಸಿದ್ದನಗೌಡ, , ಪ್ರಾಚಾರ್ಯ ಚಂದ್ರೆಗೌಡ, ಬಿಇಒ ಮಹೇಶ್ ಪೂಜಾರ, ಸಿಡಿಪಿಒ ಅವಿನಾಶ್ ಹಾಗೂ ಕಾಲೇಜಿನ ಸಿಬ್ಬಂದಿ ಮತ್ತು ವಿದ್ಯಾರ್ಥಿನಿಯರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net