ಮಹಿಳೆಯರಿಗೆ ಕೌಶಲ ಅಭಿವೃದ್ಧಿ ತರಬೇತಿ ಅಗತ್ಯ

bkt-28-2
Published on

ಬಾಗಲಕೋಟೆ: ಮಹಿಳೆಯರಿಗೆ ಕೌಶಲ ಅಭಿವೃದ್ಧಿ ತರಬೇತಿ ಅಗತ್ಯವಾಗಿದೆ ಎಂದು ನಾಂದಿ ಫೌಂಡೇಶನ್ ಬೆಂಗಳೂರು ತರಬೇತುದಾರರಾದ ಪವಿತ್ರಾ ಎಲ್.ಹೇಳಿದರು.

ನಗರದ ಬಿವಿವಿ ಸಂಘದ ಅಕ್ಕಮಹಾದೇವಿ ಮಹಿಳಾ ಕಲಾ, ವಿಜ್ಞಾನ ಹಾಗೂ ವಾಣಿಜ್ಯ ಮಹಾವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಘಟಕಗಳ ಅಡಿಯಲ್ಲಿ ಒಂದು ವಾರದ ಕೌಶಲ ತರಬೇತಿ ಉದ್ಘಾಟನಾ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಆಧುನಿಕ ಜಗತ್ತಿನಲ್ಲಿ ಮಹಿಳೆಯರಿಗೆ ಸಾಕಷ್ಟು ಸೌಲಭ್ಯಗಳು ಇವೆ, ತಮ್ಮೊಳಗಿನ ಕೌಶಲವನ್ನು ಬಳಿಸಿಕೊಂಡು ಮಹಿಳೆ ಆತ್ಮವಿಶ್ವಾಸದಿಂದ ಸ್ವತಂತ್ರ ಬದುಕನ್ನು ಕಟ್ಟಿಕೊಂಡು ಸ್ವಾಭಿಮಾನದಿಂದ ಜೀವನ ನಡೆಸಬೇಕು ಎಂದರು.

ಮಹಾವಿದ್ಯಾಲಯದ ಪ್ರಾಚಾರ್ಯ ಎಸ್.ಜೆ.ಒಡೆಯರ ಮಾತನಾಡಿ, ಜೀವನದಲ್ಲಿ ಶಿಸ್ತು, ಸಮಯ ಪಾಲನೆ ಮತ್ತು ಶ್ರದ್ಧೆಯನ್ನು ಬೆಳೆಸಿಕೊಂಡು ಅಭಿವೃದ್ಧಿ ಹೊಂದಬೇಕು. ತಮ್ಮ ನ್ಯೂನ್ಯತೆಗಳನ್ನು ಸರಿಪಡಿಸಿಕೊಂಡು ಆತ್ಮವಿಶ್ವಾಸವನ್ನು ಹೆಚ್ಚಿಸಿಕೊಳ್ಳಬೇಕು. ಉತ್ತಮವಾದ ಕೌಶಲಗಳನ್ನು ಅಳವಡಿಸಿಕೊಂಡು ಜೀವನದಲ್ಲಿ ಯಶಸ್ಸು ಗಳಿಸಬೇಕು ಎಂದರು.

ಸಂಯೋಜಕ ಪಿ.ಕೆ.ಚೌಗುಲಾ, ವೃತ್ತಿ ಮಾರ್ಗದರ್ಶನ ಮತ್ತು ಉದ್ಯೋಗ ಘಟಕದ ಸಂಯೋಜಕಿ ಕುಮಾರಿ ಸೀಮಾ ಚಾವುಸ ಇದ್ದರು. ಲಕ್ಷ್ಮೀ ಪಾಟೀಲ, ಸೃಷ್ಟಿ ಹಡಪದ ಪ್ರಾರ್ಥಿಸಿದರು. ಸುವರ್ಣಾ ಪೂಜಾರಿ ವಂದಿಸಿದರು. ಪೂಜಾ ಆರ್ಕಸಾಲಿ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net