

ಪಾಂಡವಪುರ: ರಾಜ್ಯದ ಎಲ್ಲ ಮಹಿಳೆಯರಿಗೆ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಗಳ ಬಸ್‌ಗಳಲ್ಲಿ ಉಚಿತ ಪ್ರಯಾಣ ಕಲ್ಪಿಸುವ ಸರ್ಕಾರದ ಶಕ್ತಿ ಯೋಜನೆಗೆ ಉಪವಿಭಾಗಾಧಿಕಾರಿ ಎಲ್.ಎಂ.ನಂದೀಶ್ ಭಾನುವಾರ ಚಾಲನೆ ನೀಡಿದರು.
ರಾಜ್ಯದ ಸಾರಿಗೆ ಸಂಸ್ತೆಯ ನಾಲ್ಕು ವಿಭಾಗಗಳ ಬಸ್‌ಗಳಲ್ಲಿ ಮಹಿಳೆಯರು ಉಚಿತವಾಗಿ ಪ್ರಯಾಣ ಮಾಡಲು ಘೋಷಿಸಿರುವ ಶಕ್ತಿ ಯೋಜನೆಯನ್ನು ಮಹಿಳೆಯರು, ವಿದ್ಯಾರ್ಥಿನಿಯರು ಸದ್ಬಳಕೆ ಬಳಕೆ ಮಾಡಿಕೊಳ್ಳಬೇಕು. ಸರ್ಕಾರ ಅಗತ್ಯ ಗುರುತಿನ ಚೀಟಿ ತೋರಿಸಿ 3 ತಿಂಗಳ ಕಾಲ ಓಡಾಡಲು ಅವಕಾಶ ನೀಡಿದೆ. ಬಳಿಕ ಸೇವಾ ಸಿಂಧು ಕೇಂದ್ರದಲ್ಲಿ ಅಗತ್ಯ ದಾಖಲೆ ನೀಡಿ ಯೋಜನೆ ಗುರುತಿನ ಚೀಟಿ ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ತಾಪಂ ಇಒ ಎಸ್.ಎಂ.ಲೋಕೇಶ್‌ಮೂರ್ತಿ ಮಾತನಾಡಿ, ಗ್ರಾಮಾಂತರ ಪ್ರದೇಶದ ಮಹಿಳೆಯರು ನಗರ ಪ್ರದೇಶಗಳಿಗೆ ಹೋಗಿ ದುಡಿಮೆ ಮಾಡಲು ಈ ಯೋಜನೆ ಸಹಕಾರಿಯಾಗಿದೆ. ಉಚಿತ ಪಯಣದಿಂದ ಮಹಿಳೆಯರು ಪ್ರವಾಸಿ ಸ್ಥಳಗಳಿಗೆ ತೆರಳುವುದರಿಂದ ಅಲ್ಲಿ ಉದ್ಯಮ ಸೃಷ್ಟಿಯಾಗುತ್ತದೆ. ವಿದ್ಯಾರ್ಥಿಗಳು ಹೊರ ಜಿಲ್ಲೆಗಳ ಉತ್ತಮ ಕಾಲೇಜುಗಳಲ್ಲಿ ವ್ಯಾಸಂಗ ಮಾಡಲು ಅನುಕೂಲವಾಗಲಿದೆ ಎಂದರು.
ಪಟ್ಟಣದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ತಹಸೀಲ್ದಾರ್ ಕೆ.ಸಿ.ಸೌಮ್ಯಾ ಮಹಿಳಾ ಪ್ರಯಾಣಿಕರಿಗೆ ಗುಲಾಬಿ ಹೂ ನೀಡಿ ಸ್ವಾಗತ ಕೋರಿದರು. ಕೆಎಸ್‌ಆರ್‌ಟಿಸಿ ಡಿಪೋ ತಾಲೂಕು ವ್ಯವಸ್ಥಾಪಕ ಬಿ.ಅಪ್ಪಿರೆಡ್ಡಿ ಹಾಗೂ ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್, ಪುರಸಭೆ ಸದಸ್ಯರಾದ ಜಯಲಕ್ಷ್ಮಮ್ಮ, ಧನಲಕ್ಷ್ಮೀ, ಕೆಎಸ್‌ಆರ್‌ಟಿಸಿ ಅಧಿಕಾರಿಗಳಾದ ರಮೇಶ್ ಇತರರು ಇದ್ದರು.
ಫೋಟೋ : 11-ಪಿಎನ್‌ಪಿ 2
ಪಾಂಡವಪುರ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಶಕ್ತಿ ಯೋಜನೆಗೆ ಉಪವಿಭಾಗಾಧಿಕಾರಿ ಚಾಲನೆ ನೀಡಿದರು. ತಹಸೀಲ್ದಾರ್ ಕೆ.ಸಿ.ಸೌಮ್ಯಾ, ತಾಪಂ ಇಒ ಎಸ್.ಎಂ.ಲೋಕೇಶ್‌ಮೂರ್ತಿ, ಸಬ್ ಇನ್ಸ್‌ಪೆಕ್ಟರ್ ಮಂಜುನಾಥ್ ಇದ್ದರು.