ಮಹಿಳೆಯರಿಗೆ ಬಾಗಿನ ವಿತರಣೆ

25-GPT-1
Published on

ಗುಂಡ್ಲುಪೇಟೆ: ತಾಲೂಕಿನಾದ್ಯಂತ ಗೃಹಿಣಿಯರು ವರಮಹಾಲಕ್ಷ್ಮೀ ಹಬ್ಬವನ್ನು ಶ್ರದ್ಧಾಭಕ್ತಿಯಿಂದ ಆಚರಿಸಿದರು.

ಈ ಬಾರಿ ಹೂವು, ಹಣ್ಣುಗಳ ಬೆಲೆ ಅಧಿಕವಾಗಿತ್ತು. ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದ್ದರೂ ಹಬ್ಬದ ಸಡಗರಕ್ಕೆ ಯಾವುದೇ ಕೊರತೆ ಕಾಣಲಿಲ್ಲ. ಕಳೆದ ಎರಡು ದಿನಗಳಿಂದ ಮನೆಗಳನ್ನು ಶುಚಿಗೊಳಿಸಿದ್ದ ಗೃಹಿಣಿಯರು ಶುಕ್ರವಾರ ವರಮಹಾಲಕ್ಷ್ಮೀಯನ್ನು ಕಳಸ ರೂಪದಲ್ಲಿ ಪ್ರತಿಷ್ಠಾಪಿಸಿ ಹೊಸ ಸೀರೆ, ದೇವಿಯ ಮುಖವಾಡ, ವಿವಿಧ ಹೂವುಗಳಿಂದ ಅಲಂಕರಿಸಿ ಪೂಜೆ ಸಲ್ಲಿಸಿದರು. ಬಗೆ ಬಗೆಯ ತಿಂಡಿಗಳನ್ನು ತಯಾರಿಸಿ ನೈವೇದ್ಯ ಸಲ್ಲಿಸಿದರು. ನೆರೆ ಹೊರೆಯ ಮಹಿಳೆಯರಿಗೆ ಬಾಗಿನ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net