

ಬೀದರ್: ವಿಶ್ವ ಮಹಿಳಾ ದಿನಾಚರಣೆ ನಿಮಿತ್ತ ಡಾ.ಗುರುಪಾದಪ್ಪ ನಾಗಮಾರಪಳ್ಳಿ ಫೌಂಡೇಷನ್ ವತಿಯಿಂದ ಇಲ್ಲಿನ ನಾಗಮಾರಪಳ್ಳಿ ಸಹಕಾರ ಆಸ್ಪತ್ರೆಯಲ್ಲಿ ಮಹಿಳೆಯರಿಗೆ ಸೀರೆ ವಿತರಣೆ ಮಾಡಲಾಯಿತು.
ಫೌಂಡೇಷನ್ ಅಧ್ಯಕ್ಷರೂ ಆದ ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸೂರ್ಯಕಾಂತ ನಾಗಮಾರಪಳ್ಳಿ ವತಿಯಿಂದ ಮಹಿಳೆಯರಿಗೆ ಸೀರೆ ಮತ್ತು ಹೊದಿಕೆ ವಿತರಿಸಿದ ಸಾಹಿತಿ ವಿಜಯಲಕ್ಷ್ಮೀ ಕೌಟಗೆ ಮಾತನಾಡಿ, ಮಹಿಳೆಯರು ಸಶಕ್ತರಾಗಬೇಕು. ಸಮಾಜಮುಖಿ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಹೇಳಿದರು.
ಮಾಜಿ ಸಚಿವ ದಿ. ಡಾ.ಗುರುಪಾದಪ್ಪ ನಾಗಮಾರಪಳ್ಳಿ ಅವರು ಸ್ವಸಹಾಯ ಗಂಪುಗಳನ್ನು ರಚಿಸುವ ಮೂಲಕ ಜಿಲ್ಲೆಯಲ್ಲಿ ಮಹಿಳೆಯರ ಅಭಿವೃದ್ಧಿಗೆ ಶ್ರಮಿಸಿದ್ದರು. ಇಲ್ಲಿನ ಸ್ವಸಹಾಯ ಗಂಪುಗಳ ಜಗತ್ತಿಗೆ ಮಾದರಿಯಾಗಿವೆ ಎಂದು ತಿಳಿಸಿದರು.
ಮುಖಂಡರಾದ ಬಾಬುರಾವ್ ದಾನಿ, ಪುಷ್ಪಕಕುಮಾರ ಜಾಧವ್ ಇತರರಿದ್ದರು.