

ರಾಯಚೂರು: ಮಣಿಪುರದಲ್ಲಿ ಬುಡಕಟ್ಟು ಮಹಿಳೆಯನ್ನು ಬೆತ್ತಲೆ ಮೆರವಣಿಗೆ ನಡೆಸಿದ ದುಷ್ಕರ್ಮಿಗಳನ್ನು ಬಂಸಿ ಕಠಿಣ ಶಿಕ್ಷೆಗೆ ಗುರಿಪಡಿಸುವಂತೆ ಒತ್ತಾಯಿಸಿ ಸ್ಥಳೀಯ ಜಿಲ್ಲಾಕಾರಿ ಕಚೇರಿ ಮುಂದೆ ದಲಿತ ವಿದ್ಯಾರ್ಥಿ ಪರಿಷತ್‌ನಿಂದ ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಜಿಲ್ಲಾಕಾರಿ ಕಚೇರಿ ಕೇಂದ್ರ ಸ್ಥಾನಿಕ ಅಕಾರಿ ಪ್ರಶಾಂತಕುಮಾರಗೆ ಮನವಿ ಸಲ್ಲಿಸಿ, ಮಹಿಳೆಯರ ಮೇಲಿನ ದೌರ್ಜನ್ಯ ತಡೆಗಟ್ಟುವಲ್ಲಿ ವಿಲವಾಗಿರುವ ಮಣಿಪುರ ಸರ್ಕಾರವನ್ನು ವಜಾಗೊಳಿಸಬೇಕು. ಮಹಿಳೆಯರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.
ದೇಶದಲ್ಲಿ ಮತ್ತು ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ದಿನನಿತ್ಯ ಮಹಿಳೆಯರ ಮೇಲೆ ದೌರ್ಜನ್ಯ, ಹಲ್ಲೆ, ಅತ್ಯಾಚಾರ ಪ್ರಕರಣಗಳು ನಡೆಯುತ್ತಿವೆ. ಮಹಿಳೆಯನ್ನು ಬೆತ್ತಲೆ ಮೆರವಣಿಗೆ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹಾಕಿರುವುದು ಅತ್ಯಂತ ಹೇಯ ಕೃತ್ಯವಾಗಿದೆ.
ರಾಜ್ಯ ಧರ್ಮಸ್ಥಳದಲ್ಲಿ ನಡೆದ ಸೌಜನ್ಯ ಪ್ರಕರಣ ಮತ್ತು ಜಿಲ್ಲೆಯ ಗಿಲ್ಲೆಸುಗೂರಿನಲ್ಲಿ ಕ್ಯಾಂಪ್‌ನಲ್ಲಿ ಈರಮ್ಮಗಳ ಅನುಮಾನಾಸ್ಪದ ಸಾವಿನ ಕುರಿತು ತನಿಖೆ ನಡೆಸಿ ತಪ್ಪಿತಸ್ಥರಿಗೆ ಶಿಕ್ಷೆ ವಿಸಬೇಕು. ಮುಂದಿನ ದಿನಗಳಲ್ಲಿ ಇಂತಹ ಪ್ರಕರಣಗಳು ನಡೆಯದಂತೆ ಮುಂಜಾಗ್ರತಾ ಕ್ರಮಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಪರಿಷತ್ ಪ್ರತಿಭಟನೆಯಲ್ಲಿ ಜಿಲ್ಲಾ ಸಂಚಾಲಕ ವೌನೇಶ ಜಾಲವಾಡಗಿ, ಪದಾಕಾರಿಗಳಾದ ವೌನೇಶ ತುಗ್ಗಲದಿನ್ನಿ, ಎಂ.ಈರಣ್ಣ ಹಾಗೂ ವಿವಿಧ ಕಾಲೇಜು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.