

ಚಾಮರಾಜನಗರ: ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ಸೌಲಭ್ಯಗಳನ್ನು ಸದುಪಯೋಗಪಡಿಸಿಕೊಂಡು ಮಹಿಳೆಯರು ಸ್ವಯಂ ಉದ್ಯೋಗವನ್ನು ಮಾಡುವುದು ಅಗತ್ಯವಾಗಿದೆ ಎಂದು ನಗರಸಭೆ ಪೌರಾಯುಕ್ತ ಎಸ್.ವಿ.ರಾಮದಾಸ್ ತಿಳಿಸಿದರು.
ನಗರದ ಪ್ರಥಮದರ್ಜೆ ಕಾಲೇಜಿನ ಸಭಾಂಗಣದಲ್ಲಿ ಭಾರತ ಸರ್ಕಾರದ ಮೇರಾ ಯುವ ಭಾರತ್ ವತಿಯಿಂದ ಶುಕ್ರವಾರ ಆಯೋಜಿಸಿದ್ದ ಪ್ರಮುಖ ಕಾರ್ಯಕ್ರಮಗಳ ಕುರಿತು ಕಾರ್ಯಗಾರ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದವರು.
ವಿದ್ಯಾರ್ಥಿಗಳ ಭವಿಷ್ಯವನ್ನು ಉಜ್ವಲ ಮಾಡಲು ಸರ್ಕಾರಗಳಿಂದ ಉಚಿತ ಶಿಕ್ಷಣ, ವಸತಿ ನಿಲಯಗಳು, ಪೌಷ್ಟಿಕ ಆಹಾರ, ಸಮವಸ್ತ್ರ, ವಿದ್ಯಾರ್ಥಿ ವೇತನ, ವಿದ್ಯಾರ್ಥಿನಿಯರಿಗೆ ಉಚಿತ ಸಾರಿಗೆ ಸೌಲಭ್ಯ ಹಾಗೂ ಉಚಿತ ಆರೋಗ್ಯ ತಪಾಸಣಾ ಶಿಬಿರ ಸೇರಿದಂತೆ ಹಲವಾರು ಜನಪರ ಯೋಜನೆಗಳನ್ನು ಜಾರಿ ಮಾಡಿದೆ. ಅದನ್ನು ಸದುಪಯೋಗ ಪಡಿಸಿಕೊಂಡು ವಿದ್ಯಾರ್ಥಿಗಳು ಮುಖ್ಯ ವಾಹಿನಿಗೆ ಬರಬೇಕು ಎಂದು ಕರೆ ನೀಡಿದರು.
ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಧಿಕಾರಿ ಮೊಹಮದ್ ಅಕ್ಬರ್ ಮಾತನಾಡಿ, ಎಸ್‌ಎಸ್‌ಎಲ್ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳು ಜಿಲ್ಲಾ ಆಡಳಿತ ಭವನದಲ್ಲಿರುವ ಉದ್ಯೋಗ ಮಿನಿಮಯ ಕಚೇರಿಯಲ್ಲಿ ನೋಂದಣಿ ಮಾಡಿಕೊಂಡು ನಿರುದ್ಯೋಗ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಿ. ಪ್ರಸ್ತುತ ಸಂದರ್ಭದಲ್ಲಿ ಕೌಶಲ್ಯಯುವ ಶಿಕ್ಷಣ ಹಾಗೂ ಸ್ವಯಂ ಉದ್ಯೋಗ ಅಗತ್ಯವಾಗಿದೆ ಎಂದರು.
ಕಾರ್ಯಕ್ರಮದಲ್ಲಿ ಅಂಚೆ ಇಲಾಖೆ ಅಧೀಕ್ಷಕ ಶ್ರೀಧರ್, ಎಸ್‌ಬಿಐ ನಿರ್ದೇಶಕ ರಾಕೇಶ್ ಅಕುಲ್,
ಜಿಲ್ಲೆಯುವ ಪ್ರಶಸ್ತಿ ಪುರಸ್ಕೃತ ಜಿ.ಬಂಗಾರು, ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪ್ರಾಂಶುಪಾಲೆ ಡಾ.ಆರ್.ಎಸ್.ಅಶ್ವಿನಿ, ಕೌಶಲ್ಯ ಅಭಿವೃದ್ಧಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲೇಶ್, ಮೇರಾ ಯುವ ಭಾರತ್ ಜಿಲ್ಲಾ ಯೋಜನಾಧಿಕಾರಿ ಪಿ.ಅಖಿಲ್ ಹಾಗೂ ಇತರರು ಹಾಜರಿದ್ದರು.