ಮಹಿಳೆಯರು ಆತ್ಮವಿಶ್ವಾಸದಿಂದ ಮುನ್ನುಗ್ಗಿ

08rajesh13
Published on

ಚಾಮರಾಜನಗರ: ಪ್ರತಿಯೊಂದು ಎಲ್ಲಾ ಕ್ಷೇತ್ರದಲ್ಲೂ ಮಹಿಳೆಯರು ಸಬಲೀಕರಣಗೊಳ್ಳಲು ಆತ್ಮವಿಶ್ವಾಸದಿಂದ ಮುನ್ನುಗ್ಗಿ ಅವಕಾಶಗಳನ್ನು ತಮ್ಮದಾಗಿಸಿಕೊಳ್ಳಬೇಕು ಎಂದು ಗಣಕ ವಿಜ್ಞಾನ ವಿಭಾಗದ ಉಪನ್ಯಾಸಕಿ ನಂದಿನಿ ಅಭಿಪ್ರಾಯಪಟ್ಟರು.

ನಗರದ ಹೊರವಲಯದಲ್ಲಿರುವ ಚಾಮರಾಜನಗರ ವಿಶ್ವವಿದ್ಯಾನಿಲಯದಲ್ಲಿ ಶನಿವಾರ ಬೋಧಕ ಬೋಧಕೇತರ ಸಂಘ ಹಾಗೂ ರಾಷ್ಟೀಯ ಸೇವಾ ಯೋಜನೆಯ ಸಹಯೋಗದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ಸಂದರ್ಭದಲ್ಲಿ ಹಲವು ಸವಾಲುಗಳನ್ನು ಎದುರಿಸಬೇಕಾಗಿದೆ. ಮುಖ್ಯವಾಗಿ ಕುಟುಂಬ ಮತ್ತು ಉದ್ಯೋಗ ಎರಡೂ ಕ್ಷೇತ್ರಗಳನ್ನು ಸಮನ್ವಯಗೊಳಿಸಿ ಸಮತೋಲನ ಕಾಪಾಡಿಕೊಳ್ಳುವ ಜಾಣ್ಮೆಯನ್ನು ಮಹಿಳೆಯರು ರೂಡಿಸಿಕೊಳ್ಳಬೇಕಾಗಿದೆ. ತಮ್ಮ ಸಾಧನೆಗೆ ಕೌಟುಂಬಿಕ ಬೆಂಬಲವನ್ನು ಪಡೆದುಕೊಳ್ಳುವುದು ಮುಖ್ಯವಾಗಿದೆ ಎಂದರು.

ಕನ್ನಡ ಉಪನ್ಯಾಸಕ ಬಿ.ಗುರುರಾಜ ಯರಗನಹಳ್ಳಿ ಮಾತನಾಡಿ, ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳು ಕಡಿಮೆಯಾಗುತ್ತಿಲ್ಲ. ಪುರುಷರಿಗೂ ಸಮಾಲೋಚನಾ ಕಾರ್ಯಾಗಾರಗಳನ್ನು ಹಮ್ಮಿಕೊಂಡು ಮಹಿಳೆಯರ ಬಗ್ಗೆ ಇರುವ ಧೋರಣೆಗಳು ಬದಲಾಗಬೇಕಿದೆ. ಮಹಿಳೆಯರಿಗೆ ಅಷ್ಟೇ ಅಲ್ಲ ಪುರುಷರಿಗೂ ಜಾಗೃತಿ ಕಾರ್ಯಕ್ರಮಗಳು ಎಲ್ಲಡೆ ನಡೆಯಬೇಕು ಎಂದರು.

ಕಾರ್ಯಕ್ರಮದಲ್ಲಿ ಎಂಬಿಎ ವಿಭಾಗದ ಉಪನ್ಯಾಸಕಿ ಶಶಿರ, ಗ್ರಂಥಾಲಯ ಮತ್ತು ಮಾಹಿತಿ ತಂತ್ರಜ್ಞಾನ ವಿಭಾಗದ ಉಪನ್ಯಾಸಕಿ ಶ್ವೇತಾ, ವಾಣಿಜ್ಯ ವಿಭಾಗದ ಉಪನ್ಯಾಸಕಿ ಕಾಮಿಲ ತಬಸುಮ್, ಬೋಧಕ ಬೋಧಕೇತರ ಸಂಘದ ಅಧ್ಯಕ್ಷ ಡಾ.ಮಹದೇವಮೂರ್ತಿ, ಎನ್‌ಎಸ್‌ಎಸ್ ಸಂಯೋಜನಾಧಿಕಾರಿ ಡಾ.ಆರ್.ಮಹೇಶ್, ಗಣಿತ ವಿಭಾಗದ ಉಪನ್ಯಾಸಕಿ ಹಾಜೀರ ನಜ್ರೀನ್, ದಿವ್ಯಶ್ರೀ, ಪಿ.ರಾಣಿ, ಭಾನುಪ್ರಿಯ, ದೀಪಾ, ಚೇತನ್, ಸಚಿನ್ ಹಾಗೂ ಇತರರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net