ಮಹಿಳೆಯರು ಆರೋಗ್ಯದತ್ತ ಗಮನಹರಿಸಲಿ

15-gdg-9
Published on

ಗದಗ: ಕೃಷಿಯಲ್ಲಿ ಪುರುಷರಿಗೆ ಬೆಂಬಲವಾಗಿ ಕಾರ್ಯ ನಿರ್ವಹಿಸುತ್ತಿರುವ ಮಹಿಳೆಯರು ಆರೋಗ್ಯದ ಕಡೆ ಗಮನಹರಿಸಿ ಸತ್ವಯುತ ಆಹಾರ ಸೇವಿಸಬೇಕು ಎಂದು ಪ್ರಗತಿಪರ ರೈತ ಮಹಿಳೆ ಗಂಗಮ್ಮ ಅಂಗಡಿ ಹೇಳಿದರು.

ತಾಲೂಕಿನ ಹುಲಕೋಟಿ ಗ್ರಾಮದ ಕೃಷಿ ವಿಜ್ಞಾನ ಕೇಂದ್ರದಲ್ಲಿ ಕೃಷಿ ಇಲಾಖೆ ಆಶ್ರಯದಲ್ಲಿ ಗುರುವಾರ ಆಯೋಜಿಸಿದ್ದ ರಾಷ್ಟ್ರೀಯ ರೈತ ಮಹಿಳಾ ದಿನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಸ್ವಯಂ ಉದ್ಯೋಗ ತರಬೇತಿ ಯೋಜನೆ ಮುಖ್ಯಸ್ಥ ಮಲ್ಲಿಕಾರ್ಜುನ ಜೋಳದ ಮಾತನಾಡಿ, ಕೃಷಿ ಕ್ಷೇತ್ರದ ಜತೆಗೆ ಎಲ್ಲ ಕ್ಷೇತ್ರಗಳಲ್ಲಿಯೂ ಮಹಿಳೆಯ ಪಾತ್ರ ಅಮೋಘವಾಗಿದೆ ಎಂದರು.

ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಮಲ್ಲಯ್ಯ ಕೊರವನವರ ಮಾತನಾಡಿ, ಮಹಿಳೆ ಎಲ್ಲ ರಂಗದಲ್ಲಿಯೂ ಮುಂಚೂಣಿಯಲ್ಲಿದ್ದಾಳೆ. ಅವಳು ತಾಯಿಯಾಗಿ, ಮಡದಿಯಾಗಿ, ಮಗಳಾಗಿ ಸೇವೆ ಸಲ್ಲಿಸುತ್ತಿದ್ದಾಳೆ. ಕೃಷಿಯಲ್ಲಿ ಅವಳ ಪಾತ್ರ ಹಿರಿದಾಗಿದೆ ಎಂದು ಹೇಳಿದರು.

ಕೃಷಿ ವಿಜ್ಞಾನ ಕೇಂದ್ರದ ಗೃಹ ವಿಜ್ಞಾನಿ ಡಾ. ಸುಧಾ ಮಂಕಣಿ, ಕೃಷಿ ಇಲಾಖೆ ಜಂಟಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಮಾತನಾಡಿದರು.

ಇದೇ ಸಂದರ್ಭದಲ್ಲಿ ಶಿರಹಟ್ಟಿ ತಾಲೂಕಿನ ಉಂಡೇನಹಳ್ಳಿ ಗ್ರಾಮದ ತಾಲೂಕು ಮಟ್ಟದ ಶ್ರೇಷ್ಠ ಕೃಷಿಕ ಪ್ರಶಸ್ತಿ ಪಡೆದ ಶಾಂತವ್ವ ಈಳಿಗೇರ ಅವರನ್ನು ಸನ್ಮಾನಿಸಲಾಯಿತು. ಮಹದೇವ ಭೈರವಾಡೆ ನಿರೂಪಿಸಿದರು. ನಿಶಾಂತ ಬಂಕಾಪೂರ ವಂದಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net