ಮಹಿಳೆಯರು ಆರ್ಥಿಕವಾಗಿ ಸದೃಢರಾಗುವುದು ಅಗತ್ಯ

16blrp2
Published on

ಬೇಲೂರು: ಮಹಿಳೆಯರು ಸ್ವಾವಲಂಬಿ ಜೀವನದೊಂದಿಗೆ ಆರ್ಥಿಕವಾಗಿ ಸದೃಢರಾದಾಗ ಮಾತ್ರ ಸಮಾಜದಲ್ಲಿ ಉತ್ತಮ ಕೆಲಸ ಕಾರ್ಯಗಳನ್ನು ಮಾಡಲು ಸಾಧ್ಯ ಎಂದು ಹೇಮಾವತಿ ಸ್ತ್ರೀ ಶಕ್ತಿ ಜಿಲ್ಲಾ ಒಕ್ಕೂಟದ ಅಧ್ಯಕ್ಷೆ ಭಾರತೀಗೌಡ ಹೇಳಿದರು.

ತಾಲೂಕಿನ ಅರೇಹಳ್ಳಿಯ ಡಾ.ಅಂಬೇಡ್ಕರ್ ಭವನದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಹೇಮಾವತಿ ಸ್ತ್ರೀ ಶಕ್ತಿ ಸಂಘ ಹಾಗೂ ಬ್ಲಾಕ್ ಸೊಸೈಟಿ ಸಂಯುಕ್ತಾಶ್ರಯದಲ್ಲಿ ಬುಧವಾರ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಇಂದು ಮಹಿಳೆಯು ಪುರುಷರಂತೆ ಎಲ್ಲ ಕ್ಷೇತ್ರದಲ್ಲೂ ಛಾಪನ್ನು ಮೂಡಿಸುತ್ತಿರುವುದು ಉತ್ತಮ ಬೆಳವಣಿಗೆಯಾಗಿದೆ. ಇದರೊಂದಿಗೆ ಮಹಿಳೆಯರು ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಮುಂದೆ ಬರಬೇಕು. ಆಗ ಮಾತ್ರ ಮಹಿಳೆಯರಿಗೆ ಹೆಚ್ಚನ ಗೌರವ ಸಿಗುತ್ತದೆ ಎಂದರು.

ಮಹಿಳಾ ಹಾಗೂ ಮಕ್ಕಳ ಕಲ್ಯಾಣ ಇಲಾಖೆಯ ಅಧಿಕಾರಿ ಇಂಪಾ, ಸ್ತ್ರೀ ಶಕ್ತಿ ಸಂಘದ ಪದಾಧಿಕಾರಿಗಳಾದ ಲತಾ, ಶೋಭಾ, ರತಿ ದೇವಿ, ಕೋಮಲ, ಕಮಲ ಚನ್ನಪ್ಪ, ಕೋಮಲಾಕ್ಷಿ, ಗಿರಿಜಾ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net