ಮಹಿಳೆಯರು ಆರ್ಥಿಕವಾಗಿ ಸಬಲರಾಗಿ

14ark-4
Published on



ಹಾಸನ : ಗ್ರಾಮೀಣ ಭಾಗದ ಮಹಿಳೆಯರು ಆರ್ಥಿಕವಾಗಿ ಸಬಲರಾಗಬೇಕು ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ತಾಲೂಕು ಸಂಯೋಜಕ ಜಿನ್ನ ಸಲಹೆ ನೀಡಿದರು.

ಅರಕಲಗೂಡು ತಾಲೂಕಿನ ಯಾಚನಕುಪ್ಪೆ ಗ್ರಾಮದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜ್ಞಾನ ವಿಕಾಸ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.


ಕುಟುಂಬದ ಜವಾಬ್ದಾರಿ ಯಶಸ್ವಿಯಾಗಿ ನಿಭಾಯಿಸುವಲ್ಲಿ ಮಹಿಳೆಯರ ಪಾತ್ರ ಬಹಳ ದೊಡ್ಡದು. ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆ ಹಲವಾರು ಸಂಘಗಳನ್ನು ರಚಿಸಿ ಮಹಿಳೆಯರಲ್ಲಿ ಆರ್ಥಿಕ ಜ್ಞಾನ ಹೆಚ್ಚಿಸಿ ಕೌಟುಂಬಿಕ ಉನ್ನತಿಗೆ ಸಹಕಾರಿಯಾಗಿದೆ ಎಂದರು.


ಶಿಕ್ಷಕ ಸತೀಶ್ ಮಾತನಾಡಿದರು. ಸಂಸ್ಥೆಯ ಮೇಲ್ವಿಚಾರಕಿ ಪವನಾ, ಸಮನ್ವಯಾಧಿಕಾರಿ ಹೇಮಲತಾ, ಸೇವಾ ಪ್ರತಿನಿಧಿ ಜೆ.ಆರ್. ರವೀಶ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net