

ಕೆ.ಎಂ.ದೊಡ್ಡಿ: ಮಹಿಳೆಯರು ಉನ್ನತ ಶಿಕ್ಷಣ ಪಡೆದು ಉನ್ನತ ಹುದ್ದೆಗೇರಿದಾಗ ಮಾತ್ರ ಸಬಲತೆ ಸಾಧಿಸುವುದರೊಂದಿಗೆ ಸ್ವಾವಲಂಬಿ ಜೀವನ ನಡೆಸಲು ಸಾಧ್ಯ ಎಂದು ಮಂಡ್ಯ ಉಪವಿಭಾಗಾಧಿಕಾರಿ ಎಚ್.ಎಸ್.ಕೀರ್ತನಾ ತಿಳಿಸಿದರು.
ಇಲ್ಲಿನ ಭಾರತೀ ಕಾಲೇಜಿನ ಕುವೆಂಪು ಸಭಾಂಗಣದಲ್ಲಿ ಶ್ರೀಮತಿ ಪದ್ಮ ಜಿ.ಮಾದೇಗೌಡ ಪ್ರತಿಷ್ಠಾನ ವತಿಯಿಂದ ಸೋಮವಾರ ಆಯೋಜಿಸಿದ್ದ 9 ನೇ ವರ್ಷದ ಪದ್ಮ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಪ್ರದಾನ ಮತ್ತು ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಪದ್ಮಾ ಜಿ.ಮಾದೇಗೌಡ ಮಹಿಳಾ ಸೇವಾ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಪದ್ಮಾ ಜಿ.ಮಾದೇಗೌಡ ಅವರು ಮಾಜಿ ಸಂಸದ ಜಿ.ಮಾದೇಗೌಡರ ಬೆನ್ನೆಲಬಾಗಿದ್ದರು. ಪದ್ಮಮ್ಮ ಅವರ ಶ್ರಮ ಸಾರ್ಥಕತೆ ಪಡೆಯಬೇಕಾದರೆ ಮಹಿಳೆಯರು ಉನ್ನತ ಶಿಕ್ಷಣ ಪಡೆಯಬೇಕು ಎಂದರು.
ಮೈಸೂರಿನ ಜೆಎಸ್‌ಎಸ್ ಸ್ನಾತಕೋತ್ತರ ಕೇಂದ್ರದ ಸಹ ಪ್ರಾಧ್ಯಾಪಕಿ ಡಾ.ಕುಮುದಿನಿ ಅಚ್ಚಿ ಮಾತನಾಡಿದರು. ಬಳಿಕ ರಸಪ್ರಶ್ನೆ, ಕ್ರೀಡಾ ಸ್ಪರ್ಧೆಯಲ್ಲಿ ವಿಜೇತರಾದ ಭಾರತೀ ಅಂಗ ಸಂಸ್ಥೆಗಳ ಮಹಿಳಾ ಸಿಬ್ಬಂದಿಗೆ ಬಹುಮಾನ, ಬಡ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ವಿತರಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮೈಸೂರು ಮಹಾರಾಜ ಕಾಲೇಜು ವಿಶ್ರಾಂತ ಪ್ರಾಧ್ಯಾಪಕಿ ಪ್ರೊ.ಎಚ್.ಎಂ.ವಸಂತಮ್ಮ ವಹಿಸಿದ್ದರು. ಪದ್ಮ ಜಿ.ಮಾದೇಗೌಡ, ಎಂಎಲ್‌ಸಿ ಮಧು ಜಿ.ಮಾದೇಗೌಡ, ಸಿಇಒ ಆಶಯ್ ಮಧು ಮಾದೇಗೌಡ, ಕಾರ್ಯಾಧ್ಯಕ್ಷ ಬಿ.ಬಸವರಾಜು, ಕಾರ್ಯದರ್ಶಿಗಳಾದ ಬಿ.ಎಂ.ನಂಜೇಗೌಡ, ಸಿದ್ದೇಗೌಡ, ಟ್ರಸ್ಟಿಗಳಾದ ಮುದ್ದೇಗೌಡ, ಅಣ್ಣೂರು ಜಯರಾಮು, ಪ್ರಾಂಶುಪಾಲ ಮ. ರಾಮಕೃಷ್ಣ, ಕಾರ್ಯಕ್ರಮದ ಸಂಚಾಲಕಿ ಪ್ರೊ.ಮಮತಾ ಉಪಸ್ಥಿತರಿದ್ದರು.
ಸಾಮಾಜಿಕ ಚಿಂತನೆ ಇಟ್ಟುಕೊಂಡಿರುವ ಸರಳ ವ್ಯಕ್ತಿತ್ವದ ಉಪ ವಿಭಾಗಾಧಿಕಾರಿ ಎಚ್.ಎಚ್.ಎಸ್.ಕೀರ್ತನಾ ಅವರಿಗೆ ನನ್ನ ತಾಯಿ ಹೆಸರಿನಲ್ಲಿ ಪ್ರಶಸ್ತಿ ನೀಡಿರುವುದು ಸಂತಷದ ವಿಷಯ. ನನ್ನ ತಂದೆ ಜಿ.ಮಾದೇಗೌಡ ಅವರು ಹಳ್ಳಿಗಾಡಿನ ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಸಂಸ್ಥೆ ಕಟ್ಟಿ ಲಕ್ಷಾಂತರ ವಿದ್ಯಾಥಿಗಳಿಗೆ ದಾರಿ ದೀಪವಾಗಿದ್ದಾರೆ. > ಮಧು ಜಿ.ಮಾದೇಗೌಡ ಅಧ್ಯಕ್ಷ, ಭಾರತೀ ಎಜುಕೇಷನ್ ಟ್ರಸ್ಟ್