ಮಹಿಳೆಯರು, ಕೃಷಿಕರ ಸಬಲೀಕರಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆ ಒತ್ತು

10 HANUR 1
ಹನೂರಿನಲ್ಲಿ ಆಯೋಜಿಸಿದ್ದ ತಾಲೂಕು ಮಟ್ಟದ ಸ್ವ ಉದ್ಯೋಗ ವಿಚಾರ ಸಂಕಿರಣವನ್ನು ತಹಸೀಲ್ದಾರ್ ಆನಂದಯ್ಯ ಉದ್ಘಾಟಿಸಿದರು. ಲತಾ ಬಂಗೇರಾ, ಪ್ರಕಾಶ್‌ನಾಯ್ಡು, ಪಾಲ್‌ರಾಜ್, ಪ್ರವೀಣ್‌ಕುಮಾರ್ ಇದ್ದರು.
Published on


ತಹಸೀಲ್ದಾರ್ ಆನಂದಯ್ಯ ಮೆಚ್ಚುಗೆ


ಹನೂರು: ಮಹಿಳೆಯರು ಹಾಗೂ ಕೃಷಿಕರ ಸಬಲೀಕರಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳ ಸಂಸ್ಥೆಯು ಹೆಚ್ಚಿನ ಒತ್ತು ನೀಡಿದ್ದು, ಗ್ರಾಮೀಣಾಭಿವೃದ್ಧಿಗೆ ಪೂರಕವಾದ ಕಾರ್ಯಕ್ರಮಗಳನ್ನು ಕೈಗೊಳ್ಳುತ್ತಿರುವುದು ಮೆಚ್ಚುಗೆಯ ಸಂಗತಿ ಎಂದು ತಹಸೀಲ್ದಾರ್ ಆನಂದಯ್ಯ ಬಣ್ಣಿಸಿದರು.

ಪಟ್ಟಣದ ಡಾ.ಬಿ.ಆರ್.ಅಂಬೇಡ್ಕರ್ ಸಮುದಾಯ ಭವನದಲ್ಲಿ ಗುರುವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ.ಟ್ರಸ್ಟ್ ವತಿಯಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಸ್ವ ಉದ್ಯೋಗ ವಿಚಾರ ಸಂಕಿರಣ ಉದ್ಘಾಟಿಸಿ ಮಾತನಾಡಿದರು.

ಹಳ್ಳಿಯಿಂದ ಪ್ರಾರಂಭವಾದ ಸಂಸ್ಥೆಯು ಇಂದು ರಾಜ್ಯವ್ಯಾಪಿ ಪಸರಿಸಿದ್ದು, 49 ಲಕ್ಷ ಸದಸ್ಯರನ್ನು ಹೊಂದಿದೆ. ಮಹಿಳಾ ಸಂಘಗಳನ್ನು ಅಭಿವೃದ್ಧಿ ಪಡಿಸುವುದರ ಜತೆಗೆ ಗ್ರಾಮೀಣಾಭಿವೃದ್ಧಿಯ ಸಂಕಲ್ಪವನ್ನೂ ತೊಟ್ಟಿದೆ. ಅಲ್ಲದೆ ಆರ್ಥಿಕವಾಗಿ ಪ್ರೋತ್ಸಾಹ ನೀಡುವುದರ ಜತೆಗೆ ಜನರಲ್ಲಿ ಆತ್ಮವಿಶ್ವಾಸ ಮೂಡಿಸುವ ಕೆಲಸವನ್ನೂ ಮಾಡುತ್ತಿದೆ. ಇದರಿಂದ ಸಂಸ್ಥೆಯು ಚೈತನ್ಯದ ಚಿಲುಮೆಯಾಗಿ ಕಾರ್ಯನಿರ್ವಹಿಸುತ್ತಿದ್ದು, ರಾಜ್ಯಾದ್ಯಂತ ಹೆಸರುವಾಸಿಯಾಗಿದೆ. ಹಾಗಾಗಿ ಸಂಸ್ಥೆಯ ಕಾರ್ಯವೈಖರಿ ಬಡ ಜನರಿಗೆ ದಾರಿ ದೀಪವಾಗಿದೆ ಎಂದು ತಿಳಿಸಿದರು.

ಜಿಲ್ಲಾ ಜನಜಾಗೃತಿ ವೇದಿಕೆ ಸದಸ್ಯ ಪ್ರಕಾಶ್‌ನಾಯ್ಡು ಮಾತನಾಡಿ, ಉತ್ತಮ ಸಮಾಜ ನಿರ್ಮಾಣ ಮಾಡುವ ಸಲುವಾಗಿ ಸಂಸ್ಥೆಯು ಗ್ರಾಮೀಣಾಭಿವೃದ್ಧಿಗೆ ಪೂರಕವಾಗಿ ಕಾರ್ಯನಿರ್ವಹಿಸುತ್ತಿದೆ. ಜನರು ಸ್ವಾವಲಂಬನೆ ಬದುಕನ್ನು ರೂಪಿಸಿಕೊಳ್ಳಲು ಸ್ವ ಉದ್ಯೋಗದ ಬಗ್ಗೆ ಅರಿವು ಮೂಡಿಸುತ್ತಿರುವುದು ನಿಜಕ್ಕೂ ನಿರುದ್ಯೋಗ ಸಮಸ್ಯೆಯನ್ನು ನಿವಾರಿಸುವಲ್ಲಿ ಸಹಕಾರಿಯಾಗಿದೆ ಎಂದರು.

ಗ್ರಾಮಾಭಿವೃದ್ಧಿ ಯೋಜನೆಯ ಜಿಲ್ಲಾ ನಿರ್ದೇಶಕಿ ಲತಾ ಬಂಗೇರಾ, ತಾಲೂಕು ಯೋಜನಾಧಿಕಾರಿ ಪ್ರವೀಣ್ ಕುಮಾರ್, ಮೈಸೂರು ರುಡ್ ಸಂಸ್ಥೆ ಉಪನ್ಯಸಕ ಆರ್.ಪಾಲ್‌ರಾಜ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net