ಮಾ.14 ಸಹ್ಯಾದ್ರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಮೂತ್ರ ಪಿಂಡ ದಿನಾಚಣೆ

ಮಾ.14 ಸಹ್ಯಾದ್ರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಮೂತ್ರ ಪಿಂಡ ದಿನಾಚಣೆ
Published on

ಹಾಸನ: ನಗರದ ಸಹ್ಯಾದ್ರಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ವಿಶ್ವ ಮೂತ್ರ ಪಿಂಡ ದಿನಾಚಣೆ ಅಂಗವಾಗಿ ಮಾ.14 ಗುರುವಾರರಂದು ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ ಶಿಬಿರ ಹಾಗೂ ಮೂತ್ರಪಿಂಡ ಕಾಯಿಲೆ ಬಗ್ಗೆ ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಆಸ್ಪತ್ರೆ ಮುಖ್ಯಸ್ಥೆ ಡಾ.ಭಾರತಿ ರಾಜ್‌ಶೇಖರ್ ತಿಳಿಸಿದರು.
ಇತ್ತೀಚೆಗೆ ಜೀವನ ಶೈಲಿ ಬದಲಾವಣೆಯಿಂದಾಗಿ ಯುವ ಜನರೇ ಹೆಚ್ಚು ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಹೀಗಾಗಿ ಜನರಲ್ಲಿ ಮೂತ್ರಪಿಂಡದ ಕುರಿತು ಅರಿವು ಮೂಡಿಸುವ ಸಲುವಾಗಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಆಸ್ಪತ್ರೆಯ ನೆಪ್ರೋಲಾಜಿಸ್ಟ್ ಡಾ.ಪವನ್ ಮಾತನಾಡಿ, ಪ್ರತಿ ವರ್ಷ ಮಾರ್ಚ್ ಎರಡನೇ ಗುರುವಾರವನ್ನು ವಿಶ್ವ ಮೂತ್ರಪಿಂಡ ದಿನವನ್ನಾಗಿ ಆಚರಿಸುತ್ತೇವೆ. ಜನರಿಗೆ ಮೂತ್ರಪಿಂಡದ ಬಗ್ಗೆ ಅರಿವು ಕಡಿಮೆ ಇರುವುದರಿಂದ ಇತ್ತೀಚೆಗೆ ಯುಜನರು ಕೂಡ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಈ ಹಿನ್ನೆಲೆ ಆಸ್ಪತ್ರೆ ವತಿಯಿಂದ ಅರಿವು ಮೂಡಿಸುವ ಕಾರ್ಯಕ್ರಮದ ಜೊತೆಗೆ ಉಚಿತ ಅರೋಗ್ಯ ತಪಾಸಣಾ ಶಿಬಿರ ಆಯೋಜಿಸಲಾಗಿದೆ ಎಂದು ಹೇಳಿದರು.
ಡಾ. ಹಬೀಬ್ ಮಾತನಾಡಿ, ಕಾರ್ಯಕ್ರಮದಲ್ಲಿ ಶಾಸಕ ಎಚ್.ಪಿ. ಸ್ವರೂಪ್ ಪ್ರಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಹಿಮ್ಸ್ ನಿರ್ದೇಶಕ ಡಾ. ಸಂತೋಷ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಲೋಕೇಶ್ ಮತ್ತಿತರರು ಭಾಗವಹಿಸುವರು ಎಂದು ತಿಳಿಸಿದರು.
ಸುದ್ದಿಗೋಷ್ಟಿಯಲ್ಲಿ ಆಸ್ಪತ್ರೆಯ ಲ್ಯಾಬ್ ಟೆಕ್ನಿಷಿಯನ್ ರಾಮು, ಅಭಿಷೇಕ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net