

ಚಾಮರಾಜನಗರ: ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದಿಂದ ಚಾಮರಾಜನಗರ ಮತ್ತು ಸಂತೇಮರಹಳ್ಳಿ ಉಪವಿಭಾಗ ವ್ಯಾಪ್ತಿಯಲ್ಲಿ 4ನೇ ತ್ರೈಮಾಸಿಕ ನಿರ್ವಹಣೆ ಕಾಮಗಾರಿಯನ್ನು ಮಾ.16ರಂದು ಹಮ್ಮಿಕೊಂಡಿರುವುದರಿಂದ ಅಂದು ಬೆಳಗ್ಗೆ 9 ರಿಂದ ಸಂಜೆ 5 ಗಂಟೆಯವರೆಗೆ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ.
ಹಿರಿಕೆರೆ, ಕಾಳಿಕಾಂಬ ಕಾಲೋನಿ, ಚಂದಕವಾಡಿ, ರೇಚಂಬಳ್ಳಿ, ಸರಗೂರುಮೋಳೆ, ಅಯ್ಯನಪುರ, ಮಲ್ಲೇದೇವನ ಹಳ್ಳಿ, ನವೋದಯ, ಹೊಂಡರಬಾಳು, ಜ್ಯೋತಿಗೌಡನಪುರ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಸಾರ್ವಜನಿಕರು ನಿಗಮದ ಜೊತೆ ಸಹಕರಿಸಬೇಕು. ವಿದ್ಯುತ್ ಸಂಬಂಧಿತ ದೂರು ಮತ್ತು ಸಹಾಯಕ್ಕಾಗಿ ಗ್ರಾಹಕರು ಉಚಿತ ದೂ.ಸಂ 1912 ಗೆ ಕರೆ ಮಾಡುವಂತೆ ನಿಗಮದ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.