ಮಾ.1ರಂದು ಸಿಎಂ ನಗರಕ್ಕೆ ಆಗಮನ ಕಾರ್ಯಕ್ರಮವನ್ನು ಯಶಸ್ವಿ ಡಿಸಿ

ಮಾ.1ರಂದು ಸಿಎಂ ನಗರಕ್ಕೆ ಆಗಮನ ಕಾರ್ಯಕ್ರಮವನ್ನು ಯಶಸ್ವಿ  ಡಿಸಿ
Published on

ಹಾಸನ: ಮುಖ್ಯ ಮಂತ್ರಿಯವರು ಮಾ.1 ರಂದು ನಗರಕ್ಕೆ ಆಗಮಿಸಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕು ಸ್ಥಾಪನೆ ಮತ್ತು ಫಲಾನುಭವಿಗಳ ಸಮಾವೇಶದಲ್ಲಿ ಭಾಗವಹಿಸಲಿರುವರು. ಸದರಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಅಗತ್ಯ ಸಿದ್ಧತೆಗೆ ಕ್ರಮವಹಿಸುವಂತೆ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಕಾರ್ಯಕ್ರಮ ಕುರಿತು ಪೂರ್ವಭಾವಿ ಸಭೆಯ ನಡೆಸಿ ಮಾತನಾಡಿದ ಅವರು, ನಗರದ ಸರ್ಕಾರಿ ಇಂಜಿನಿಯರಿಂಗ್ ಕಾಲೇಜು ಆವರಣದಲ್ಲಿ ಮಾರ್ಚ್ 1 ರಂದು ಬೆಳಗ್ಗೆ 11 ಗಂಟೆಗೆ ಕಾರ್ಯಕ್ರಮ ಪ್ರಾರಂಭವಾಗಲಿದೆ. ಶಿಷ್ಟಾಚಾರದಲ್ಲಿ ಯಾವುದೇ ಲೋಪವಾಗದಂತೆ ಮುತುವರ್ಜಿ ವಹಿಸಿ ಪಾಲನೆ ಮಾಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಎಲ್ಲಾ ಅಧಿಕಾರಿಗಳು ಸಮನ್ವಯತೆಯಿಂದ ಒಂದು ತಂಡದಂತೆ ಕೆಲಸ ಮಾಡುವುದರ ಜೊತೆಗೆ ಸಕ್ರೀಯವಾಗಿ ತೊಡಗಿಸಿಕೊಂಡು ಅತ್ಯಂತ ಯಶಸ್ವಿಯಾಗಿ ಜರುಗುವಂತೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಿ ಎಂದು ತಿಳಿಸಿದರು.
ನಗರದ ಸ್ವಚ್ಚತೆಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಜೊತೆಗೆ ಕಾರ್ಯಕ್ರಮ ನಡೆಯುವ ಸ್ಥಳದಲ್ಲಿಯೂ ಸ್ವಚ್ಚತೆ ಮತ್ತು ಕುಡಿಯುವ ನೀರು ವ್ಯವಸ್ಥೆಗೆ ಕ್ರಮವಹಿಸುವಂತೆ ನಗರ ಸಭೆ ಆಯುಕ್ತರಿಗೆ ಸೂಚನೆ ನೀಡಿದರು. ವಿವಿಧ ನಿಗಮ ಹಾಗೂ ಇಲಾಖೆಗಳ ಮೂಲಕ ಫಲಾನುಭವಿಗಳಿಗೆ ಸವಲತ್ತು ವಿತರಣೆಗೆ ಪಟ್ಟಿ ಸಿದ್ಧಪಡಿಸಲು ನಿರ್ದೇಶನ ನೀಡಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಉಪ ವಿಭಾಗಾಧಿಕಾರಿಗಳಾದ ಮಾರುತಿ, ಶೃತಿ ಹಾಗೂ ಜಿಲ್ಲಾ ಮಟ್ಟದ ವಿವಿಧ ಅಧಿಕಾರಿಗಳು ಹಾಜದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net