ಮಾ. 25 ರಂದು ಹಿಮವದ್ ಗೋಪಾಲಸ್ವಾಮಿ ಬೆಟ್ಟದಲ್ಲಿ ಬ್ರಹ್ಮ ರಥೋತ್ಸವ, ಜಾತ್ರೆ

Published on

ಚಾಮರಾಜನಗರ: ಗುಂಡ್ಲುಪೇಟೆ ತಾಲೂಕಿನ ಹಿಮವದ್ ಗೋೀಪಾಲಸ್ವಾಮಿ ಬೆಟ್ಟದಲ್ಲಿ ಮಾ,.25 ರಂದು ಬ್ರಹ್ಮ ರಥೋತ್ಸವ ಹಾಗೂ ಜಾತ್ರೆ ನಡೆಯಲಿದೆ. ಬ್ರಹ್ಮ ರಥೋತ್ಸವ ಅಂಗವಾಗಿ ಮಾ.22ರಿಂದ 28ರವರೆಗೆ ದೇವಸ್ಥಾನದಲ್ಲಿ ವಿಶೇಷ ಉತ್ಸವ ಕಾರ್ಯಕ್ರಮಗಳು ನಡೆಯಲಿವೆ.

22 ರಂದು ಬೆಳಗ್ಗೆ ಫಲ ಪಂಚಾಮೃತಾಭಿಷೇಕ, ಸಂಜೆ ಆದಿವಾಸರ, ಅಂಕುರಾರ್ಪಣ ಗರುಡ ಪ್ರತಿಷ್ಠಾ ರಕ್ಷಾಬಂಧನ. 23 ರಂದು ಬೆಳಗ್ಗೆ ಉತ್ಸವ, ಪಷ್ಪಬಲಿ, ಧ್ವಜಾರೋಹಣ, ಸಂಜೆ ಭೇರಿತಾಡನ ಯಾಗಶಾಲಾ ಪ್ರವೇಶ. 24 ರಂದು ಬೆಳಗ್ಗೆ ಉತ್ಸವ, ಸಂಜೆ 4 ಗಂಟೆಗೆ ಕಾಶಿಯಾತ್ರಾ ಉತ್ಸವ ಸಂಬಂಧ ಮಾಲಾಪೂರ್ವಕ ಶ್ರೀರುಕ್ಮಿಣಿ ಸತ್ಯಭಾಮ ಸಹಿತ ಶ್ರೀಹಿಮವದ್ ಗೋಪಾಲಸ್ವಾಮಿಯವರ ’ದಿವ್ಯಕಲ್ಯಾಣೋತ್ಸವ’. 25 ರಂದು ಬೆಳಗ್ಗೆ ’ದಿವ್ಯ ಬ್ರಹ್ಮ ರಥೋತ್ಸವ, ಸಂಜೆ ಶಾಂತ್ಯುತ್ಸವ. 26ರಂದು ಬೆಳಗ್ಗೆ ಉತ್ಸವ ಕೈಂಕರ್ಯ ಮತ್ತು ಬೆಳ್ಳಿ ಗರುಡೋತ್ಸವ ಸಂಜೆ ಡೋಲೋತ್ಸವ ಶಯನೋತ್ಸವ. 27 ರಂದು ಸಂಧಾನ ಲೀಲೋತ್ಸವ, ಅವಭೃತ ಸ್ನಾನ, ಸಂಜೆ ಉತ್ಸವ, ಫಣಿಮಾಲಾ ಪ್ರಬಂಧಸೇವೆ. ಪೂರ್ಣಾಹುತಿ. 28 ರಂದು ಬೆಳಿಗ್ಗೆ ಮಹಾಭಿಷೇಕ, ಮಹಾಮಂಗಳಾರತಿ, ದ್ವಾದಶಾರಾಧನಾ, ಪುಷ್ಪಯಾಗ ಧ್ವಜಾವರೋಹಣ, ಉಧ್ವಾಸನ ಪ್ರಬಂಧ ಸೇವೆ ಸೇತೂ ಸೇವೆ ಮೂಕಬಲಿ ವಿಶೇಷ ಉತ್ಸವ ಕಾರ್ಯಕ್ರಮಗಳು ನಡೆಯಲಿದೆ.

ದೇವರ ದರ್ಶನಕ್ಕೆ ಆಗಮಿಸುವ ಭಕ್ತಾದಿಗಳು ಕೆ.ಎಸ್.ಆರ್.ಟಿ.ಸಿ ಬಸ್‌ಗಳನ್ನು ಹೊರತುಪಡಿಸಿ ಉಳಿದ ದ್ವಿಚಕ್ರ, 4 ಚಕ್ರ, ಮಿನಿ ವಾಹನ ಮತ್ತು ಇತರೆ ವಾಹನಗಳಲ್ಲಿ ಬರುವ ಭಕ್ತಾಧಿಗಳು, ಸಾರ್ವಜನಿಕರು ತಮ್ಮ ವಾಹನಗಳನ್ನು ಅರಣ್ಯ ಇಲಾಖೆಯ ಚೆಕ್‌ಪೋಸ್ಟ್ ಮೈದಾನದಲ್ಲಿ ಪಾರ್ಕಿಂಗ್ ಮಾಡಬೇಕು. ಕೆ.ಎಸ್.ಆರ್.ಟಿ.ಸಿ ಬಸ್‌ಗಳಲ್ಲಿ ನಿಗದಿತ ದರ ಪಾವತಿಸಿ ದೇವರ ದರ್ಶನಕ್ಕೆ ಹೋಗಿ ಬರುವ ವ್ಯವಸ್ಥೆ ಮಾಡಲಾಗಿದ್ದು, ಸಾರ್ವಜನಿಕರು, ಭಕ್ತಾಧಿಗಳು ಸಹಕರಿಸಬೇಕೆಂದು ಗುಂಡ್ಲುಪೇಟೆ ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net