ಮಾ.3 ರಂದು ನಾಗಮಂಗಲ ಕನ್ನಡ ಸಾಹಿತ್ಯ ಸಮ್ಮೇಳನ

08 NMG 02 (2)
ನಾಗಮಂಗಲ ಪಟ್ಟಣದ ತಾಲೂಕು ಆಡಳಿತಸೌಧದ ಸಭಾಂಗಣದಲ್ಲಿ ಶಾಸಕ ಸುರೇಶ್‌ಗೌಡ ಅಧ್ಯಕ್ಷತೆಯಲ್ಲಿ ಸಾಹಿತ್ಯ ಸಮ್ಮೇಳನ ಕುರಿತಾಗಿ ಪೂರ್ವಭಾವಿ ಸಭೆ ನಡೆಯಿತು. ಸ್ವಾಮೀಗೌಡ, ಚಂದ್ರಮೌಳಿ, ಬಸವೇಗೌಡ ಇದ್ದರು.
Published on

ನಾಗಮಂಗಲ: ಕನ್ನಡ ಸಾಹಿತ್ಯ ಪರಿಷತ್ ವತಿಯಿಂದ 8ನೇ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಾರ್ಚ್ 3 ರಂದು ಪಟ್ಟಣದ ಜೂನಿಯರ್ ಕಾಲೇಜಿನ ಆವರಣದಲ್ಲಿ ಅರ್ಥಪೂರ್ಣವಾಗಿ ಆಚರಿಸಲು ಶಾಸಕ ಸುರೇಶ್‌ಗೌಡ ಅಧ್ಯಕ್ಷತೆಯಲ್ಲಿ ಬುಧವಾರ ತಾಲೂಕು ಆಡಳಿತಸೌಧದ ಸಭಾಂಗಣದಲ್ಲಿ ನಡೆದ ಪೂರ್ವಭಾವಿ ಸಭೆಯಲ್ಲಿ ನಿರ್ಧರಿಸಲಾಯಿತು.

ಮಾ.3 ರಂದು ಪಟ್ಟಣದ ಶ್ರೀ ಸೌಮ್ಯಕೇಶವಸ್ವಾಮಿ ದೇವಾಲಯದ ಆವರಣದಿಂದ ವೇದಿಕೆಯವರೆಗೆ ವಿವಿಧ ಕಲಾತಂಡಗಳ ಮೆರವಣಿಗೆ ಮೂಲಕ ಭುವನೇಶ್ವರಿತಾಯಿಯ ಭಾವಚಿತ್ರವನ್ನು ಮೆರವಣಿಗೆ ಮೂಲಕ ಕರೆತರಲಾಗುವುದು. ಇದೇ ವೇದಿಕೆಯಲ್ಲಿ ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರನ್ನು ಸನ್ಮಾನಿಸಲಾಗುವುದು. ಸಮ್ಮೇಳನವನ್ನು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಶ್ರೀ ಡಾ.ನಿರ್ಮಲಾನಂದನಾಥ ಸ್ವಾಮೀಜಿ ಉದ್ಘಾಟಿಸಲಿದ್ದಾರೆ. ಸಮಾರೋಪ ಸಮಾರಂಭದ ಸಾನ್ನಿಧ್ಯವನ್ನು ಶ್ರೀ ಪ್ರಸನ್ನನಾಥ ಸ್ವಾಮೀಜಿ ವಹಿಸಲಿದ್ದಾರೆ ಎಂದು ತಿಳಿಸಿದರು.

ಸಭೆಯಲ್ಲಿ ತಹಸೀಲ್ದಾರ್ ಸ್ವಾಮೀಗೌಡ, ತಾ.ಪಂ. ಇಒ ಚಂದ್ರಮೌಳಿ, ಕಸಾಪ ಅಧ್ಯಕ್ಷ ಬಸವೇಗೌಡ ಸೇರಿದಂತೆ ಮತ್ತಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net