ಮಾ. 5ರಂದು ಜೆಎಸ್‌ಎಸ್ ವೈದ್ಯಕೀಯ ಮಹಾವಿದ್ಯಾಲಯ ಪದವೀಧರ ದಿನ ಆಚರಣೆ

Published on

ಮೈಸೂರು: ಜೆಎಸ್‌ಎಸ್ ಉನ್ನತ ಶಿಕ್ಷಣ ಮತ್ತು ಸಂಶೋಧನಾ ಅಕಾಡೆಮಿಯ ಅಂಗ ಸಂಸ್ಥೆಯಾದಸ ಜೆಎಸ್‌ಎಸ್ ವೈದ್ಯಕೀಯ ಮಹಾವಿದ್ಯಾಲಯದ ಪದವೀಧರ ದಿನಾಚರಣೆಯನ್ನು ಮಾ. 5ರಂದು ಸಂಜೆ 4.30ಕ್ಕೆ ಆಯೋಜಿಸಲಾಗಿದೆ.

ಎಸ್.ಎಸ್.ನಗರದಲ್ಲಿರುವ ಸಂಸ್ಥೆ ಆವರಣದಲ್ಲಿ ಕಾರ್ಯಕ್ರಮ ನಡೆಯಲಿದ್ದು, ಶ್ರೀ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಬೆಂಗಳೂರಿನ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಸಚ್ಚಿದಾನಂದ ಪದವೀಧರರನ್ನು ಉದ್ದೇಶಿಸಿ ಮಾತನಾಡುವುದರ ಜತೆಗೆ ಪ್ರಶಸ್ತಿ ಮತ್ತು ಪದಕಗಳನ್ನು ವಿತರಿಸಲಿದ್ದಾರೆ. ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾರ್ಯ ನಿರ್ವಾಹಕ ಕಾರ್ಯದರ್ಶಿ ಡಾ ಸಿ.ಜಿ.ಬೆಟಸೂರಮಠ ಅಧ್ಯಕ್ಷತೆ ವಹಿಸಲಿದ್ದಾರೆ. ಅಕಾಡೆಮಿಯ ಸಮಕುಲಾಧಿಪತಿ ಡಾ ಬಿ.ಸುರೇಶ್, ಕುಲಪತಿ ಡಾ.ಸುರಿಂದರ್ ಸಿಂಗ್ ಭಾಗವಹಿಸಲಿದ್ದಾರೆ ಎಂದು ಪ್ರಾಂಶುಪಾಲ ಡಾ.ಎಚ್.ಬಸವನಗೌಡಪ್ಪ ಗುರುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕಾರ್ಯಕ್ರಮದಲ್ಲಿ 217 ಪದವೀಧರರು ಪದವಿ ಪ್ರಮಾಣಪತ್ರಗಳನ್ನು ಸ್ವೀಕರಿಸಲಿದ್ದಾರೆ. ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಚಿನ್ನದ ಪದಕ, ನಗದು ಬಹುಮಾನ ಮತ್ತು ಮೆರಿಟ್ ಪ್ರಮಾಣಪತ್ರಗಳನ್ನು ನೀಡಲಾಗುವುದು. ಎಲ್ಲ ಯುವ ಪದವೀಧರರು ಹಿಪೊಕ್ರೆಟಿಕ್ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇದೇ ಸಂದರ್ಭದಲ್ಲಿ ಅತ್ಯುತ್ತಮ ಶಿಕ್ಷಕರು ಮತ್ತು 2020 ರ ಅತ್ಯುತ್ತಮ ಸಂಶೋಧಕರಿಗೆ ಮೆಚ್ಚುಗೆ ಪ್ರಮಾಣಪತ್ರ ನೀಡಲಾಗುತ್ತಿದೆ ಎಂದು ವಿವರಿಸಿದರು.

11 ಶ್ರೇಷ್ಠ ವಿದ್ಯಾರ್ಥಿಗಳು 10 ಚಿನ್ನದ ಪದಕ ಮತ್ತು 14 ನಗದು ಬಹುಮಾನವನ್ನು ಹಂಚಿಕೊಳ್ಳುತ್ತಿದ್ದಾರೆ. ಈ ಬಾರಿ ಡಾ.ರುದ್ರ ರೂಪೇಶ್ ರೆಡ್ಡಿ 3 ಚಿನ್ನದ ಪದಕ ಮತ್ತು 3 ನಗದು ಬಹುಮಾನವನ್ನು ಪಡೆದಿದ್ದಾರೆ ಎಂದರು.

ಕುಲಸಚಿವ ಡಾ.ಬಿ.ಮಂಜುನಾಥ್ ಸೇರಿದಂತೆ ಇತರರು ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net