ಮಾ.8ಕ್ಕೆ ಜಿಲ್ಲಾ ಮಟ್ಟದ ವಿಶ್ವ ಮಹಿಳಾ ದಿನ ಆಚರಣೆ

17Kush02
Published on

ಕುಶಾಲನಗರ: ಕೊಡಗು ಪ್ರೆಸ್ ಕ್ಲಬ್ ಬೆಳ್ಳಿ ಮಹೋತ್ಸವ ಸಾಂಸ್ಕೃತಿಕ ಸಮಿತಿ ವತಿಯಿಂದ ಕುಶಾಲನಗರ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಸಹಯೋಗದಲ್ಲಿ ಮಾ.8ರಂದು ಕುಶಾಲನಗರದಲ್ಲಿ ಜಿಲ್ಲಾ ಮಟ್ಟದ ವಿಶ್ವ ಮಹಿಳಾ ದಿನ ಆಚರಿಸಲು ನಿರ್ಧರಿಸಲಾಯಿತು.


ಕುಶಾಲನಗರ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಪೂರ್ವ ಸಿದ್ಧತಾ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದ್ದು, ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ವನಿತಾ ಚಂದ್ರಮೋಹನ್ ಅವರನ್ನು ಕಾರ್ಯಕ್ರಮದ ಸಂಚಾಲಕರನ್ನಾಗಿ ಆಯ್ಕೆ ಮಾಡಲಾಯಿತು.


ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸುವ ನಿಟ್ಟಿನಲ್ಲಿ ವಿವಿಧ ಸಮಿತಿಗಳನ್ನು ರಚಿಸಲಾಯಿತು. ಕಾರ್ಯಕ್ರಮದ ರೂಪುರೇಷೆ, ಸಾಂಸ್ಕೃತಿಕ ಕಾರ್ಯಕ್ರಮಗಳು, ಊಟೋಪಚಾರ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಯಿತು.


ಕಾರ್ಯಕ್ರಮ ಸಂಚಾಲಕಿ ವನಿತಾ ಚಂದ್ರಮೋಹನ್ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಸಂಘದ ಅಧ್ಯಕ್ಷ ಎಂ.ಎನ್. ಚಂದ್ರಮೋಹನ್, ಖಜಾಂಚಿ ಕುಡೆಕಲ್ ಗಣೇಶ್, ಕಾರ್ಯದರ್ಶಿ ಕೆ.ಕೆ. ನಾಗರಾಜ ಶೆಟ್ಟಿ, ನಿರ್ದೇಶಕರಾದ ಕೆ.ಜೆ.ಶಿವರಾಜ್, ಮೊಹಮ್ಮದ್ ಮುಸ್ತಫ, ರಾಷ್ಟ್ರೀಯ ಸಮಿತಿ ಸದಸ್ಯ ಸುನಿಲ್ ಪೊನ್ನೇಟಿ, ಸಂಘದ ಜಿಲ್ಲಾ ನಿರ್ದೇಶಕ ಟಿ.ಆರ್.ಪ್ರಭುದೇವ್, ಜಯಪ್ರಕಾಶ್, ಪ್ರದೀಪ್ ಕುಮಾರ್, ಜಯಲಕ್ಷ್ಮೀ ನಂಜುಂಡಸ್ವಾಮಿ, ಬಿಂದು ಸುನೀಲ್, ಭಜನಾ ಮಂಡಳಿ ಪ್ರಮುಖರಾದ ರಮಾ ವಿಜಯೇಂದ್ರ, ಲಕ್ಷ್ಮೀ, ಸುಮಾ ಶಿವರಾಜ್ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net