ಮಾ. 8ರಂದು ಕುದೇರಿನಲ್ಲಿ ಕಾನೂನು ಅರಿವು ಕಾರ್ಯಕ್ರಮ

Published on

ಚಾಮರಾಜನಗರ: ವಿಶ್ವ ಮಹಿಳಾ ದಿನಾಚರಣೆ ಅಂಗವಾಗಿ ಕುದೇರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಮಹಿಳೆಯರಿಗೆ ಕಾನೂನು ಅರಿವು ಕಾರ್ಯಕ್ರಮವನ್ನು ಮಾ.8ರಂದು ಬೆಳಗ್ಗೆ 10.30 ಗಂಟೆಗೆ ಕಾಲೇಜಿನ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಜಿಲ್ಲಾ ವಕೀಲರ ಸಂಘದ ನಿಕಟಪೂರ್ವ ಅಧ್ಯಕ್ಷ ಉಮ್ಮತ್ತೂರು ಇಂದುಶೇಖರ್ ಉದ್ಘಾಟಿಸುವರು. ಯಳಂದೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಅರ್ಥಶಾಸ್ತ್ರ ಸಹಾಯಕ ಪ್ರಾಧ್ಯಾಪಕಿ ಎಂ. ಗಿರಿಜಾ ಪಾಲ್ಗೊಳ್ಳುವರು. ಕುದೇರು ಪೊಲೀಸ್ ಠಾಣೆಯ ಸಹಾಯಕ ಪೊಲೀಸ್ ನಿರೀಕ್ಷಕಿ ಕುಮುದ, ಜಿಲ್ಲಾ ಪಂಚಾಯಿತಿಯ ಜಿಲ್ಲಾ ತರಬೇತಿ ಸಂಯೋಜಕ ಟಿ.ಜೆ. ಸುರೇಶ್ ಭಾಗವಹಿಸುವರು. ಕುದೇರು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಪ್ರೊ. ಥಿಯೋಡರ್ ಲೂಥರ್ ಅಧ್ಯಕ್ಷತೆ ವಹಿಸುವರು. ಅಧೀಕ್ಷಕ ಕೆ.ಸಿ. ರವಿ, ಇತಿಹಾಸ ವಿಭಾಗದ ಮುಖ್ಯಸ್ಥ ಡಾ. ಎನ್.ಜೆ. ಶಶಿಕಲಾ ಉಪಸ್ಥಿತರಿರುವರು ಎಂದು ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net