ಮಾ.ಹನುಂತೇಗೌಡ ನಿಧನ

ಮಾ.ಹನುಂತೇಗೌಡ ನಿಧನ
Published on

ಹಾಸನ: ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಮಾ.ಹನುಂತೇಗೌಡ (90) ಅವರು ಭಾನುವಾರ ನಗರದ ಜಯನಗರದಲ್ಲಿರುವ ತಮ್ಮ ನಿವಾಸದಲ್ಲಿ ನಿಧನರಾದರು.
ಸರ್ಕಾರಿ ಪ್ರಾಥಮಿಕ ಶಾಲೆ ಶಿಕ್ಷಕರಾಗಿ ವೃತ್ತಿ ಜೀವನ ಆರಂಭಿಸಿದ ಮಾ.ಹನುಂತೇಗೌಡ ಅವರು ದಿವಂಗತ ಎಚ್.ಬಿ. ಜ್ವಾಲನಯ್ಯ ಅವರ ಅಧಿಯಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದರು. ನಂತರ ಜಿಲ್ಲಾಧ್ಯಕ್ಷರು ಕೂಡ ಆಗಿದ್ದರು. ಮೃತರಿಗೆ ಇಬ್ಬರು ಪುತ್ರರಿದ್ದಾರೆ.
ಪಾರ್ಥಿವ ಶರೀರವನ್ನು ಜಯನಗರದ ಅವರ ನಿವಾಸದಲ್ಲಿ ಸಾರ್ವಜನಿಕ ದರ್ಶನಕ್ಕೆ ಇಡಲಾಗಿದೆ. ಸೋಮವಾರ ಬೆಳಿಗ್ಗೆ 9 ಗಂಟೆಗೆ ನಗರದ ಕನ್ನಡ ಸಾಹಿತ್ಯ ಪರಿಷತ್ ಭವನದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಎಂದು ಕಸಾಪ ಜಿಲ್ಲಾಧ್ಯಕ್ಷ ಡಾ.ಎಚ್.ಎಲ್.ಮಲ್ಲೇಶಗೌಡ ಅವರು ತಿಳಿಸಿದ್ದಾರೆ. ಬಳಿಕ 10 ಗಂಟೆಗೆ ಮೃತರ ಅವರ ಸ್ವಂತ ಊರಾದ ಸಾಲಗಾಮೆ ರಸ್ತೆಯ ಮಾವಿನಹಳ್ಳಿಯಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.
ಇವರ ನಿಧನಕ್ಕೆ ಹಾಸನ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಜಿಲ್ಲಾಧ್ಯಕ್ಷ ಬಿ.ಎನ್.ರಾಮಸ್ವಾಮಿ, ಎಚ್.ಬಿ ಮದನಗೌಡರು,ಡಾ.ನಾಯಕರಹಳ್ಳಿ ಮಂಜೇಗೌಡ, ಮಾಜಿ.ಗೌರವಾಧ್ಯಕ್ಷ ರವಿನಾಕಲಗೂಡು ಮುಂತಾದವರು ಸಂತಾಪ ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net