

ಬಾಗಲಕೋಟೆ: ಪ್ರೊ.ಆರ್.ಎಂ.ನಾಯನೇಗಲಿ ಅವರ ಬದುಕಿನ ಪಯಣದಲಿ ವೃತ್ತಿಯ ಸೊಗಡು ಗ್ರಂಥ ಲೋಕಾರ್ಪಣೆ ಸಮಾರಂಭ ಮಾ.೨೩ ರಂದು ಬೆಳಗ್ಗೆ ೧೦.೩೦ ಗಂಟೆಗೆ ಸಾಯಿ ಮಂದಿರದ ಸಭಾಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಅಖಿಲ ಭಾರತ ಶರಣ ಸಾಹಿತ್ಯ ಪರಿಷತ್ತಿನ ಬಾಗಲಕೋಟೆ ಜಿಲ್ಲಾಧ್ಯಕ್ಷ ಎ.ಎಸ್.ಪಾವಟೆ ಹೇಳಿದರು.
ನಗರದ ಪ್ರೆಸ್‌ಕ್ಲಬ್‌ನಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹೊಳೆ ಹುಚ್ಚೇಶ್ವರ ಸಂಸ್ಥಾನಮಠದ ಮ.ನಿ.ಪ್ರ ಹುಚ್ಚೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ. ಬಿವಿವಿ ಸಂಘದ ಕಾರ್ಯಾಧ್ಯಕ್ಷ ಡಾ.ವೀರಣ್ಣ ಚರಂತಿಮಠ ಅಧ್ಯಕ್ಷತೆ ವಹಿಸಲಿದ್ದಾರೆ. ವೀರಶೈವ ಲಿಂಗಾಯತ ಮಹಾಸಭಾ ಜಿಲ್ಲಾಧ್ಯಕ್ಷ ಜಿ.ಎನ್.ಪಾಟೀಲ, ಸಾಹಿತಿ ಪಿ.ಜಿ.ಸಿದ್ದಾಪುರ ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ಬಸವೇಶ್ವರ ಗ್ರಾಮೀಣಾಭಿವೃದ್ಧಿ ಸಂಘದ ಆಡಳಿತಾಽಕಾರಿ ಪ್ರೊ.ಎ.ಎಸ್.ಪಾಟೀಲ ಕೃತಿ ಕುರಿತು ಮಾತನಾಡಲಿದ್ದಾರೆ. ವಿದ್ಯಾರ್ಥಿಗಳು, ಸಹದ್ಯೋಗಿಗಳು, ಬಂಧು, ಮಿತ್ರರರು ಆಗಮಿಸಬೇಕು ಎಂದು ತಿಳಿಸಿದರು.
ಮುಖಂಡರಾದ ಪ್ರೊ..ಸಿದ್ದರಾಮಯ್ಯ ಮಠಪತಿ, ಪ್ರೊ.ಆರ್.ಎಂ.ನಾಯನೇಗಲಿ ಇದ್ದರು.