ಮಾ.೩೧ ರೊಳಗೆ ಕಾಮಗಾರಿ ಪೂರ್ಣಗೊಳಿಸಿ

bkt-6-3
ಬಾಗಲಕೋಟೆ ನಗರಸಭೆ ನೂತನ ಸಭಾಭವನದಲ್ಲಿ ನಗರಸಭೆ ಅಧ್ಯಕ್ಷೆ ಜ್ಯೋತಿ ಭಜಂತ್ರಿ ಅಧ್ಯಕ್ಷತೆಯಲ್ಲಿ ಸೋಮವಾರ ಸಾಮಾನ್ಯ ಸಭೆ ಜರುಗಿತು. ಉಪಾಧ್ಯಕ್ಷ ಬಸವರಾಜ ಅವರಾದಿ, ಸಭಾಪತಿ ಅಂಬಾಜಿ ಜೋಶಿ, ಆಯುಕ್ತ ಆರ್.ವಾಸಣ್ಣ, ಬುಡಾ ಆಯುಕ್ತ ಗಣಪತಿ ಪಾಟೀಲ ಸೇರಿದಂತೆ ಇತರರು ಇದ್ದರು.
Published on

ಬಾಗಲಕೋಟೆ: ಬಾಗಲಕೋಟೆ ನಗರದಲ್ಲಿ ಕೈಗೊಂಡಿರುವ ಅಭಿವೃದ್ಧಿ ಕಾಮಗಾರಿಗಳನ್ನು ಮಾ.೩೧ ವರೆಗೆ ಪೂರ್ಣಗೊಳಿಸಬೇಕು. ಯಾವುದೇ ಕಾರಣಕ್ಕೂ ತಡಮಾಡಬಾರದು ಎಂದು ಶಾಸಕ ವೀರಣ್ಣ ಚರಂತಿಮಠ ನಗರಸಭೆ, ಬಿಟಿಡಿಎ ಅಽಕಾರಿಗಳಿಗೆ ಖಡಕ್ ಸೂಚನೆ ನೀಡಿದರು.

ಇಲ್ಲಿನ ನಗರಸಭೆ ನೂತನ ಸಭಾಭವನದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ನಗರಸಭೆ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ನಗರದ ೩೫ ವಾರ್ಡಗಳಲ್ಲಿ ಕೈಗೊಂಡಿರುವ ಕಾಮಗಾರಿಗಳು ಶೀಘ್ರ ಪೂರ್ಣಗೊಳ್ಳಬೇಕು. ಮುಂದಿನ ತಿಂಗಳ ಸಭೆ ವೇಳೆಗೆ ಎಲ್ಲವನ್ನು ಪರಿಶೀಲಿಸುತ್ತೇನೆ. ತಕ್ಷಣ ಬಾಕಿ ಉಳಿದಿರುವ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದರು.

ವಿದ್ಯಾಗಿರಿಯಲ್ಲಿ ಬಿಡಾಡಿ ದನಗಳ ಹಾಗೂ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದೆ. ಇವುಗಳ ಹಾವಳಿ ತಪ್ಪಿಸಲು ಕ್ರಮ ಕೈಗೊಳ್ಳಬೇಕು ಎಂದು ಸದಸ್ಯರು ಮನವಿ ಮಾಡಿದರು. ಈ ವೇಳೆ ಶಾಸಕ ವೀರಣ್ಣ ಚರಂತಿಮಠ, ನಗರದಲ್ಲಿ ಜನರಿಗೆ ತೊಂದರೆ ನೀಡುತ್ತಿರುವ ಬಿಡಾಡಿ ಜಾನುವಾರು ಹಾಗೂ ಗೂಳಿಗಳನ್ನು ಶಿವಯೋಗಮಂದಿರ ಅಥವಾ ಇನ್ನಿತರ ಕಡೆ ಇರುವ ಗೋಶಾಲೆಗಳಿಗೆ ಕಳುಹಿಸಲು ತಕ್ಷಣ ಕ್ರಮ ಕೈಗೊಳ್ಳಬೇಖು. ಬೀದಿ ನಾಯಿಗಳ ಹಾವಳಿಗೆ ಕಡಿವಾಣ ಹಾಕಬೇಕು ಎಂದು ನಿರ್ದೇಶನ ನೀಡಿದರು.

ನವನಗರದ ಎಲ್‌ಐಸಿ ವೃತ್ತಕ್ಕೆ ಡಾ.ಎಪಿಜೆ ಅಬ್ದುಲ್ ಕಲಾಂ ಅವರ ಹೆಸರು ನಾಮಕರಣ ಮಾಡಲು ಸಾಮಾನ್ಯ ಸಭೆಯಲ್ಲಿ ಸರ್ವಾನುಮತದಿಂದ ನಿರ್ಣಯ ಕೈಗೊಳ್ಳಲಾಯಿತು. ನಗರಸಭೆಯ ಅಧ್ಯಕ್ಷೆ ಜ್ಯೋತಿ ಭಜಂತ್ರಿ ಅಧ್ಯಕ್ಷತೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು.
ನಗರಸಭೆ ಅಧ್ಯಕ್ಷತೆ ಜ್ಯೋತಿ ಭಜಂತ್ರಿ, ಉಪಾಧ್ಯಕ್ಷ ಬಸವರಾಜ ಅವರಾದಿ, ಸಭಾಪತಿ ಅಂಬಾಜಿ ಜೋಶಿ, ಆಯುಕ್ತ ಆರ್.ವಾಸಣ್ಣ, ಬುಡಾ ಆಯುಕ್ತ ಗಣಪತಿ ಪಾಟೀಲ ಸೇರಿದಂತೆ ಇತರರು ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net