ಮಾಚಿದೇವ ಅಭಿವೃದ್ದಿ ನಿಗಮ ಸಾಲ-ಸೌಲಭ್ಯಕ್ಕೆಅರ್ಜಿ

application
Published on

ಕಲಬುರಗಿ: ಕರ್ನಾಟಕ ಮಡಿವಾಳ ಮಾಚಿದೇವ ಅಭಿವೃದ್ದಿ ನಿಗಮದಿಂದ ೨೦೨೩-೨೪ನೇ ಸಾಲಿಗೆ ಅನುಷ್ಠಾನಗೊಳ್ಳುತ್ತಿರುವ ವಿವಿಧ ಯೋಜನೆ ಅಡಿ ಸಹಾಯಧನ/ ಸಾಲ-ಸೌಲಭ್ಯ ಪಡೆಯಲು ಸೇವಾಸಿಂಧು ಪೋರ್ಟಲ್‌ದಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ ಎಂದು ನಿಗಮದ ಕಲಬುರಗಿ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಪ್ರಕಟಣೆ ತಿಳಿಸಿದೆ.

ಸ್ವಯಂ ಉದ್ಯೋಗ ನೇರಸಾಲ ಯೋಜನೆ, ಗಂಗಾ ಕಲ್ಯಾಣ ಯೋಜನೆ (ಈ ಯೋಜನೆಯಡಿ ಕನಿಷ್ಠ ೨ ಎಕರೆ ಜಮೀನು ಹೊಂದಿರಬೇಕು), ಅರಿವು-ಶೈಕ್ಷಣಿಕ ನೇರಸಾಲ ಯೋಜನೆ (ಹೊಸತು), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ವ್ಯಾಸಂಗಕ್ಕೆ ಸಾಲ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆ ಹಾಗೂ ಸ್ವಯಂ ಉದ್ಯೋಗ ಸಾಲ ಯೋಜನೆ(ವಾಣಿಜ್ಯ ಬ್ಯಾಂಕುಗಳ ಸಹಯೋಗದೊಂದಿಗೆ) ಅಡಿ ಅರ್ಜಿ ಸಲ್ಲಿಸಬಹುದು.

ಅರ್ಜಿದಾರರು ಕರ್ನಾಟಕ ರಾಜ್ಯದ ಕಾಯಂ ನಿವಾಸಿಯಾಗಿರಬೇಕು. ಮಡಿವಾಳ ಹಾಗೂ ಅದರ ಉಪ ಜಾತಿಗಳಿಗೆ ಸೇರಿರಬೇಕು. ಕಡ್ಡಾಯವಾಗಿ ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಹೊಂದಿರಬೇಕು. ವಯೋಮಿತಿ ೧೮ ರಿಂದ ೫೫ ವರ್ಷದೊಳಗಿರಬೇಕು.

ಕರ್ನಾಟಕ-ಒನ್, ಅಟಲ್-ಜಿ, ಜನಸ್ನೇಹಿ ಕೇಂದ್ರ ಮತ್ತು ನಾಗರೀಕ ಸೇವಾ ಕೇಂದ್ರಗಳಲ್ಲಿ ಸೇವಾಸಿಂಧು ಪೋರ್ಟಲ್‌ದಲ್ಲಿ ಆನ್‌ಲೈನ್ ಮೂಲಕ ನವೆಂಬರ್ ೩ರೊ¼ಗೆ ಅರ್ಜಿ ಸಲ್ಲಿಸಬೇಕು. ಶೈಕ್ಷಣಿಕ ಸಾಲ ಯೋಜನೆಗೆೆ ಕೊನೆಯ ದಿನಾಂಕ ಇರುವುದಿಲ್ಲ.

ಅರ್ಜಿದಾರರು ನಿಗಮದ ಸಹಾಯವಾಣಿ ಸಂಖ್ಯೆ ೦೮೦-೨೨೩೭೪೮೩೨ ಮತ್ತು ೮೦೫೦೭೭೦೦೦೪ ಅಥವಾ ೮೦೫೦೭೭೦೦೦೫, ಕರ್ನಾಟಕ ಮಡಿವಾಳ ಮಾಚೀದೇವ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರ ಕಚೇರಿ ಹಾಗೂ ದೂರವಾಣಿ ಸಂಖ್ಯೆ: ೦೮೪೭೨-೨೭೮೬೩೫ಗಳಿಗೆ ಸಂಪರ್ಕಿಸಲು ಕೋರಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net