ಮಾಚಿದೇವರ ಜಯಂತಿ ಅರ್ಥಪೂರ್ಣ ಆಚರಣೆ

25ydg01
Published on


ಯಾದಗಿರಿ: ಮಡಿವಾಳ ಮಾಚಿದೇವರ ಜಯಂತ್ಯುತ್ಸವ ಕಾರ್ಯಕ್ರಮ ಫೆ.01ರಂದು ಜಿಲ್ಲಾಡಳಿತದಿಂದ ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ ತಿಳಿಸಿದರು.

ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಕರೆದಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿ, ಅಂದು ಬೆಳಗ್ಗೆ 11.30ಕ್ಕೆ ನಗರದ ಜಿಲ್ಲಾಡಳಿತ ಭವನದ ಆಡಿಟೋರಿಯಂನಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ. ಆಚರಣೆಗೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ವಹಿಸಲಾದ ಕೆಲಸ-ಕಾರ್ಯಗಳನ್ನು ಅಚ್ಚುಕಟ್ಟಾಗಿ, ಯಾವುದೇ ಲೋಪ ಆಗದಂತೆ ನಿರ್ವಹಿಸಬೇಕು ಎಂದರು.

ಶಿಷ್ಠಾಚಾರ ಪಾಲನೆ, ಅತಿಥಿ ಗಣ್ಯರನ್ನು, ನುರಿತ ಉಪನ್ಯಾಸಕರನ್ನು ಆಹ್ವಾನಿಸುವುದು ಸೇರಿ ಎಲ್ಲ ರೀತಿಯ ಸೌಕರ್ಯವನ್ನು ಯಾವುದೇ ತೊಂದರೆ ಬಾರದಂತೆ ನೋಡಿಕೊಳ್ಳಬೇಕು. ವೇದಿಕೆ, ಕುಡಿಯುವ ನೀರು, ವಿದ್ಯುತ್, ಅಲಂಕಾರ, ಧ್ವನಿವರ್ಧಕ, ಸ್ವಚ್ಛತೆ ಮತ್ತು ಸೂಕ್ತ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net